ಯೋಜನೆಯ ತಾಲೂಕು ಅಧ್ಯಕ್ಷ ಕಲ್ಕುಣಿಕೆ ರಾಘು ಮಾತನಾಡಿ, ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 75,262 ಫಲಾನುಭವಿಗಳಿದ್ದು, ಶೇ.97 ಗುರಿ ಸಾಧಿಸಲಾಗಿದೆ. ಶಕ್ತಿ ಯೋಜನೆಯಡಿ ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ ಒಟ್ಟು 18 ಕೋಟಿ 41 ಸಾವಿರ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಶೇ.97 ಸಾಧನೆಯಾಗಿದೆ. ಯುವನಿಧಿ ಯೋಜನೆಯಡಿ ಸೆಪ್ಟೆಂಬರ್ ಅಂತ್ಯಕ್ಕೆ 1,152 ಪದವಿ ವಿದ್ಯಾರ್ಥಿಗಳು ಮತ್ತು 7(ಒಟ್ಟು 1159) ಮಂದಿ ಡಿಪ್ಲೊಮಾ ವಿದ್ಯಾರ್ಥಿಗಳು ಸೌಲಭ್ಯ ಪಡೆದಿದ್ದು, ಈವರೆಗೆ 3.10 ಕೋಟಿ ರೂ.ಗಳ ನಿರುದ್ಯೋಗ ಭತ್ಯೆ ನೀಡಲಾಗಿದೆ. ನಿರುದ್ಯೋಗಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯರ ಸಹಕಾರ ಪಡೆದುಕೊಳ್ಳಬೇಕು. ಕಾಲೇಜುಗಳ ಸಂಪರ್ಕದೊಂದಿಗೆ ಕ್ರಮವಹಿಸಿರಿ. ತಾಲೂಕಿನ 41 ಗ್ರಾಪಂ ಕಚೇರಿಗಳಲ್ಲೂ ಪಂಚ ಗ್ಯಾರಂಟಿ ಕುರಿತು ಸಮಗ್ರ ಮಾಹಿತಿಯನ್ನು ಕಾಲಕಾಲಕ್ಕೆ ಪ್ರದರ್ಶಿಸುವುದು ಕಡ್ಡಾಯ ಎಂದರು.