ಇಬ್ಬರೂ ಹಳೇ ಕೆಸರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪುಷ್ಪಾ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶಾಪ್ ಬಾಗಿಲು ಹಾಕುವುದು ತಡವಾಗುತ್ತಿದ್ದ ಕಾರಣ ನಿತ್ಯವೂ ತಡವಾಗಿ ಮನೆಗೆ ಬರುತ್ತಿದ್ದಳು. ಇದೇ ವಿಚಾರಕ್ಕೆ ಗಂಡ- ಹೆಂಡತಿ ನಡುವೆ ಗಲಾಟೆ ನಡೆದಿತ್ತು. ಹಿರಿಯರು ರಾಜಿ ಸಂಧಾನ ಮಾಡಿಸಿದ್ದರು. ಮತ್ತೆ ಬುಧವಾರ ಮಧ್ಯರಾತ್ರಿ ಗಲಾಟೆ ನಡೆದಿದೆ. ಈ ವೇಳೆ ಪುಷ್ಪಾ ತಮ್ಮ ಸಹೋದರನಿಗೆ ಕರೆ ಮಾಡಿ ಗಲಾಟೆ ವಿಚಾರ ತಿಳಿಸಿದ್ದಾರೆ. ಈ ವೇಳೆ ತಾಳ್ಮೆ ಕಳೆದುಕೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪಾಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಬಳಿಕ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.