ಪತ್ನಿ ಕೊಲೆಗೆ ಯತ್ನಿಸಿದ್ದ ಪತಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಕೋರ್ಟ್ ಆದೇಶ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಿಚ್ಛೇದನ ನೀಡಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ದೈಹಿಕ ಮತ್ತು ಮಾನಸಿಕ ಹಿಂಸೆ
ಮೈಸೂರು: ಪತ್ನಿ ಕೊಲೆಗೆ ಯತ್ನಿಸಿದ್ದ ಪತಿಗೆ ನಗರದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ನಗರದ ನಯಾಜ್ ಅಹಮ್ಮದ್ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಈತ ಸೀಮಾ ಭಾನು ಅವರನ್ನು ವಿವಾಹವಾಗಿದ್ದು, ಅವರ ಮೇಲೆ ಅನುಮಾನದಿಂದ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ. ವಿಚ್ಛೇದನ ನೀಡಬೇಕು.
ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ್ದ. ಈ ಕುರಿತು ಸೀಮಾ ಭಾನು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಲಷ್ಕರ್ ಠಾಣೆ ಪೊಲೀಸರು, ಆರೋಪಿ ವಿರುದ್ಧ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಕೆ.ಎನ್.ರೂಪಾ ಅವರು ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಯೊಂದಿಗೆ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಬಿ.ಇ.ಯೋಗೇಶ್ವರ ಮತ್ತು ಎ.ಎನ್.ಮಧು ಸರ್ಕಾರದ ಪರ ವಾದ ಮಂಡಿಸಿದ್ದರು.