ಗಾಯನವನ್ನೇ ಉಸಿರಾಗಿಸಿಕೊಂಡು ಅದರಲ್ಲಿಯೇ ಬದುಕು ರೂಪಿಸಿಕೊಂಡೆ : ಗಾಯಕ ನವೀನ್ ಸಜ್ಜು

 ಮೈಸೂರು ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಾಲೇಜಿನ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಎನ್‌ಸಿಸಿ ರೇಂಜರ್ಸ್ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಗಾಯಕ ನವೀನ್ ಸಜ್ಜು ಉದ್ಘಾಟಿಸಿದರು. ಪ್ರೊ.ಡಿ.ಎಸ್.ಪ್ರತಿಮಾ, ಪ್ರೊ.ಎಂ.ಎಸ್. ಅನಿತಾ, ಡಾ.ಕೆ.ಎಸ್ ಭಾಸ್ಕರ್, ಡಾ.ಟಿ.ನಾಗವೇಣಿ ಹಾಗೂ ಇತರರು ಇದ್ದರು.
ಮೈಸೂರು ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಾಲೇಜಿನ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಎನ್‌ಸಿಸಿ ರೇಂಜರ್ಸ್ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಗಾಯಕ ನವೀನ್ ಸಜ್ಜು ಉದ್ಘಾಟಿಸಿದರು. ಪ್ರೊ.ಡಿ.ಎಸ್.ಪ್ರತಿಮಾ, ಪ್ರೊ.ಎಂ.ಎಸ್. ಅನಿತಾ, ಡಾ.ಕೆ.ಎಸ್ ಭಾಸ್ಕರ್, ಡಾ.ಟಿ.ನಾಗವೇಣಿ ಹಾಗೂ ಇತರರು ಇದ್ದರು.
Published on
ಮೈಸೂರು: ‘ಗಾಯನದ ಮೂಲಕ ಜೀವನ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಕೆಲಸಕ್ಕೆ ಹೋಗು’ ಎಂಬುದು ನನ್ನ ಪಾಲಕರ ಸಲಹೆಯಾಗಿತ್ತು. ಆದರೆ, ಗಾಯನವನ್ನೇ ಉಸಿರಾಗಿಸಿಕೊಂಡ ನಾನು ಅದರಲ್ಲಿಯೇ ಬದುಕು ರೂಪಿಸಿಕೊಂಡೆ ಎಂದು ಗಾಯಕ ನವೀನ್ ಸಜ್ಜು ಹೇಳಿದರು.
ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಾಲೇಜಿನ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಎನ್‌ಸಿಸಿ ರೇಂಜರ್ಸ್ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಶಾಲಾ ದಿನಗಳಲ್ಲಿ ನಾನು ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಬಹುಮಾನ ಪಡೆಯುತ್ತಿದ್ದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಇಂತಹ ವೇದಿಕೆಗಳಲ್ಲಿ ತೋರಿಸುವ ಮೂಲಕ ಯಶಸ್ಸು ಗಳಿಸಬೇಕು ಎಂದು ಕರೆ ನೀಡಿದರು.
ಪ್ರಸ್ತುತ ಪ್ರತಿಭೆಗಳಿಗೆ ಸಾಕಷ್ಟು ವೇದಿಕೆಗಳು ದೊರೆಯುತ್ತಿದೆ. ಅದನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು. ಕೆಲವೊಮ್ಮೆ ಅವಕಾಶಗಳನ್ನು ನಾವೇ ಸೃಷ್ಟಿಸಿಕೊಳ್ಳಬೇಕು. ವಿದ್ಯಾರ್ಥಿಗಳ ತಮ್ಮ ಪ್ರತಿಭೆಯನ್ನು ಹೊರ ಜಗತ್ತಿಗೆ ಪ್ರದರ್ಶಿಸುವ ಕಲೆ, ಕೌಶಲವನ್ನು ರೂಢಿಸಿಕೊಳ್ಳಬೇಕು ಎಂದರು.
ರಾಷ್ಟ್ರೀಯ ಹೆದ್ದಾರಿ-275ರ ಮೈಸೂರು-ಮಡಿಕೇರಿ ವಿಭಾಗದ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಆರ್.ಶೈಲಜಾ ಮಾತನಾಡಿ, ಮಹಾರಾಣಿ ಕಾಲೇಜಿನಲ್ಲಿ ಇದುವರೆಗೆ ಲಕ್ಷಾಂತರ ಹೆಣ್ಣು ಮಕ್ಕಳು ಕಲಿತು ಬದುಕು ರೂಪಿಸಿಕೊಂಡಿದ್ದಾರೆ. ಸಾಕಷ್ಟು ಮಹಿಳೆಯರು ಸಮಾಜಕ್ಕೆ ಬೆಳಕಾಗಿದ್ದಾರೆ ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜು ಶಿಕ್ಷಣ ವಿಭಾಗ ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕಿ ಪ್ರೊ.ಡಿ.ಎಸ್.ಪ್ರತಿಮಾ, ಮಹಾರಾಣಿ ಮಹಿಳಾ ಕಲಾ ಕಾಲೇಜು ಪ್ರಾಂಶುಪಾಲೆ ಪ್ರೊ.ಎಂ.ಎಸ್. ಅನಿತಾ, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಡಾ.ಕೆ.ಎಸ್ ಭಾಸ್ಕರ್, ಖಜಾಂಚಿ ಡಾ.ಟಿ.ನಾಗವೇಣಿ, ಐಕ್ಯೂಎಸಿ ಸಂಚಾಲಕ ಪ್ರೊ.ಎ ಆನಂದ್, ಪತ್ರಾಂಕಿತ ವ್ಯವಸ್ಥಾಪಕ ಕೆ.ವೆಂಕಟೇಶ್, ವಿದ್ಯಾರ್ಥಿನಿ ಅಧ್ಯಕ್ಷೆ ವೈ ಹರ್ಷಿತಾ, ವಿದ್ಯಾರ್ಥಿನಿ ಕಾರ್ಯದರ್ಶಿ ಎನ್.ಎಂ. ವೈಷ್ಣವಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net