ನನಗೂ, ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ : ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Published on
ಮೈಸೂರು: ನನಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ಆದರೆ ಸಮಯ, ಸಂದರ್ಭ ಎಲ್ಲವನ್ನೂ ನಿರ್ಧಾರ ಮಾಡಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರವಾಗಿ ನಮ್ಮಲ್ಲಿ ಯಾವ ಗೊಂದಲವಿಲ್ಲ. ಸಿಎಂ, ಡಿಸಿಎಂ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ. ಹೀಗಾಗಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇರುತ್ತದೆ. ಆದರೆ ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.
ಸಿಎಂ ವಿಚಾರದಲ್ಲಿ ನನ್ನನ್ನು ಏಕೆ ಎಳೆದು ತರುತ್ತಿದ್ದೀರಾ? ನನಗೂ ಆಸೆ ಇದೆ. ನಮ್ಮ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ನೋಡೋಣ ಎಂದರು.
ವಿಪಕ್ಷ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ. ಕೇವಲ ಭಾಷಣ ಮಾಡುವಲ್ಲಿ ವಿಜಯೇಂದ್ರ, ಅಶೋಕ್, ಪ್ರಲ್ಹಾದ ಜೋಶಿ ಬಿಜಿಯಾಗಿದ್ದಾರೆ. ರೈತರ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸುತ್ತಿಲ್ಲ. ಕೇಂದ್ರದಲ್ಲಿ ಸಂಸದರು ಧ್ವನಿ ಎತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ಹಿಂದೆ ಬಿಜೆಪಿ ಇದ್ದಾಗ ಜಗದೀಶ ಶೆಟ್ಟರ್, ಸದಾನಂದಗೌಡ ಎಲ್ಲರೂ ಸಿಎಂ ಆದರು. ಅವರ ರೀತಿಯ ಕಿತ್ತಾಟ, ಗೊಂದಲ ನಮ್ಮಲ್ಲಿ ಇಲ್ಲ. ನಿನ್ನೆ ಸಭೆಯಲ್ಲೂ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದೇವೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net