ಆದರ್ಶಗಳು ಮಾನವಕ ಕುಲಕ್ಕೆ ಸಾರ್ವಕಾಲಿಕ

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕ ಕುಮಾರಸ್ವಾಮಿ, ಪ್ರೀತಿ, ಪುನೀತ್, ರೇಷ್ಮಾ, ಸುನಿತಾ ಶಾರದಾ, ಮೀನಾ ಇದ್ದರು.
ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕ ಕುಮಾರಸ್ವಾಮಿ, ಪ್ರೀತಿ, ಪುನೀತ್, ರೇಷ್ಮಾ, ಸುನಿತಾ ಶಾರದಾ, ಮೀನಾ ಇದ್ದರು.
Published on
ಹನಗೋಡು: ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮಾನವ ಕುಲಕ್ಕೆ ಸಾರ್ವಕಾಲಿಕವಾಗಿದ್ದು, ಅವರು ಸಾರಿದ ಮನುಜ ಮತ ವಿಶ್ವಪಥ ಸಂದೇಶ ಶ್ರೇಷ್ಠವಾಗಿದೆ ಎಂದು ಮುಖ್ಯಶಿಕ್ಷಕ ಕುಮಾರಸ್ವಾಮಿ ತಿಳಿಸಿದರು.
ಸಮೀಪದ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಕುವೆಂಪು ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕುವೆಂಪು ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ಅವರು ವಿಶ್ವಮಾನವ ಧರ್ಮವನ್ನು ರೂಪಿಸಿಕೊಟ್ಟ ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯ ಹಾಗೂ ವಿಚಾರಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಕಾರಿಯಾಗಲಿದೆ ಎಂದರು.
ವಿದ್ಯಾರ್ಥಿಗಳಿಗೆ ಕುವೆಂಪು ಅವರ ವಿಚಾರಧಾರೆ ಬಗ್ಗೆ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎ.ಪ್ರೀತಿ, ಪುನೀತಕುಮಾರ್, ಶಾರದಾ, ಮೀನಾ, ರೇಷ್ಮಾ, ಸುನೀತಾ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net