ಹೆಚ್ಚು ಅಪಘಾತ ಸ್ಥಳಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚನೆ

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಆಯೋಜಿಸಲಾಗಿತ್ತು. ಮಲ್ಲಿಕ್, ಸುಂದರ್ ರಾಜ್, ರಸ್ತೆ ಸುರಕ್ಷತಾ ಸಮಿತಿ ಸಭೆಯ ಸದಸ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಆಯೋಜಿಸಲಾಗಿತ್ತು. ಮಲ್ಲಿಕ್, ಸುಂದರ್ ರಾಜ್, ರಸ್ತೆ ಸುರಕ್ಷತಾ ಸಮಿತಿ ಸಭೆಯ ಸದಸ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅನುಮೋದನೆ ಆಗಿರುವ ಕಡೆ 30 ದಿನಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು
  • ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದು, ಕೆಲವರು ಅಂಗವಿಕಲರಾಗುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ
ಮೈಸೂರು:ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಪಘಾತ ವಲಯ (ಬ್ಲಾಕ್‌ಸ್ಪಾಟ್)ಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಅವೈಜ್ಞಾನಿಕ ಹುಬ್ಬುಗಳು ಇದ್ದರೆ ತೆರವುಗೊಳಿಸಿ. ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಸ್ಥಳಗಳನ್ನು ಗುರುತಿಸಿ, ದುರಸ್ತಿಗೆ 15 ದಿನಗಳ ಒಳಗೆ ವರದಿ ಸಲ್ಲಿಸಿ. ಈಗಾಗಲೇ ಅನುಮೋದನೆ ಆಗಿರುವ ಕಡೆ 30 ದಿನಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದು, ಕೆಲವರು ಅಂಗವಿಕಲರಾಗುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತೀವ್ರ ತಿರುವು ಇರುವ ರಸ್ತೆಗಳಲ್ಲಿ ತಿರುವುಗಳನ್ನು ಸ್ವಲ್ಪ ಕಡಿಮೆ ಮಾಡಬೇಕು. ತಿರುವುಗಳಲ್ಲಿ ಸೈನ್ ಬೋರ್ಡ್‌ಗಳನ್ನು ಅಳವಡಿಸಿ, ಅಗತ್ಯ ಇರುವ ಕಡೆ ವೈಜ್ಞಾನಿಕ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಿ ಎಂದು ನಿರ್ದೇಶನ ನೀಡಿದರು.
ಹೈವೇ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸಬಾರದು. ಪ್ರತಿಯೊಂದು ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ವೈಜ್ಞಾನಿಕ ಕ್ರಮಗಳನ್ನು ಗುರುತಿಸಿ ಅಂದಾಜು ಮಾಡಿ ಅನುಮೋದನೆ ಪಡೆದು ಬಳಿಕ ಅಳವಡಿಸಬೇಕು. ಒಟ್ಟಿನಲ್ಲಿ ಅಪಘಾತಗಳನ್ನು ಆದಷ್ಟು ಕಡಿಮೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿಯೊಂದು ಜೀವವು ಅಮೂಲ್ಯವಾದದ್ದು. ರಸ್ತೆಗಳು ವೈಜ್ಞಾನಿಕವಾಗಿ ಇದ್ದರೆ, ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಬಹುದು. ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರದ ವಾಹನ ಚಾಲಕರು ಕಡ್ಡಾಯವಾಗಿ ಶೀಟ್ ಬೆಲ್ಟ್ ಧರಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಡಿಸಿಪಿ ಸುಂದರ್ ರಾಜ್, ರಸ್ತೆ ಸುರಕ್ಷತಾ ಸಮಿತಿ ಸಭೆಯ ಸದಸ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net