ಕಾಯಕವೇ ಇಲ್ಲವೆಂದರೆ ಕಾರ್ಮಿಕರು ಏನು ಮಾಡಲು ಸಾಧ್ಯ ?

 ನಗರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆ.ಬಿ.ಲಿಂಗರಾಜು, ಎ.ಪಿ.ನಾಗೇಶ್, ಎಸ್.ಬಾಲಕೃಷ್ಣ, ರಘುರಾಂ ವಾಜಪೇಯಿ ಇತರರಿದ್ದರು.
ನಗರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆ.ಬಿ.ಲಿಂಗರಾಜು, ಎ.ಪಿ.ನಾಗೇಶ್, ಎಸ್.ಬಾಲಕೃಷ್ಣ, ರಘುರಾಂ ವಾಜಪೇಯಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಸಂಘಟಿತ ಕಾರ್ಮಿಕರಿಗೆ ಪ್ರಶಸ್ತಿ ಪ್ರದಾನ
  • ಕಾರ್ಮಿಕ ದಿನಾಚರಣೆ
  • ಅಸಂಘಟಿಕ ಕಾರ್ಮಿಕರಲ್ಲಿ ಬಹಳಷ್ಟು ಜನರು ಪದವಿ ಪೂರ್ಣಗೊಳಿಸಿದ್ದಾರೆ. ಅವರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಉದ್ಯೋಗ ಸೃಷ್ಟಿಸುವ ಕೆಲಸ ಮಾಡಬೇಕು
ಮೈಸೂರು: ಕಾರ್ಮಿಕ ದಿನಾಚರಣೆ ಪ್ರಯುಕ್ತ ಮೈಸೂರು ಕನ್ನಡ ವೇದಿಕೆಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಅಸಂಘಟಿತ ಕಾರ್ಮಿಕರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಅಧ್ಯಕ್ಷ ಕೆ.ಬಿ.ಲಿಂಗರಾಜು ಮಾತನಾಡಿ, ಉಚಿತ ಯೋಜನೆಗಳಿಂದ ಯಾವ ಫಲವೂ ಇಲ್ಲ. ಉದ್ಯೋಗ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಕಲ್ಪಿಸಿ ದಾಗ ಮಾತ್ರ ಜನಸಾಮಾನ್ಯರ ಜೀವನಕ್ಕೆ ಉಪಯೋಗವಾಗುತ್ತದೆ ಎಂದರು.
ಪ್ರತಿಯೊಬ್ಬರೂ ಕಾಯಕ ಮಾಡಬೇಕು ಎಂದು ಬಸವಣ್ಣನವರು ಹೇಳಿದರು. ಆದರೆ ಈಗ ಕಾಯಕವೇ ಇಲ್ಲವೆಂದರೆ ಕಾರ್ಮಿಕರು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಅಸಂಘಟಿಕ ಕಾರ್ಮಿಕರಲ್ಲಿ ಬಹಳಷ್ಟು ಜನರು ಪದವಿ ಪೂರ್ಣಗೊಳಿಸಿದ್ದಾರೆ. ಅವರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಉದ್ಯೋಗ ಸೃಷ್ಟಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಎಪಿಎನ್ ಸಂಸ್ಥೆಯ ಎ.ಪಿ.ನಾಗೇಶ್ ಮಾತನಾಡಿ, ಸ್ವಯಂ ಉದ್ಯೋಗ ಮಾಡಲು ಬಹಳಷ್ಟು ಜನರಲ್ಲಿ ಬಂಡವಾಳ ಇಲ್ಲ. ಇತ್ತ ಅವರಿಗೆ ಸೂಕ್ತ ಕೆಲಸ ಮಾಡಲು ಆಗುತ್ತಿಲ್ಲ. ಈ ನಡುವೆ, ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಉದ್ಯೋಗ ಅವಕಾಶಗಳು ಕಡಿಮೆಯಾಗುತ್ತಿವೆ. ಇದಕ್ಕೆ ಪರಿಹಾರ ಹುಡುಕಲಿಲ್ಲ ಎಂದರೆ ಭವಿಷ್ಯದಲ್ಲಿ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಮುಖಂಡರಾದ ರಘುರಾಂ ವಾಜಪೇಯಿ, ಯದುನಂದ, ನಾಲಾಬೀದಿ ರವಿ, ಮನೋಹರ್, ಸಾಲುಂಡಿ ದೊರೆಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net