ಒಳ ಮೀಸಲಾತಿ ಜಾರಿಗೆ ತಂದಿದ್ದೇ ತಪ್ಪು : ಮಾಜಿ ಶಾಸಕ ಹರ್ಷವರ್ಧನ್

ಮಾಜಿ ಶಾಸಕ ಹರ್ಷವರ್ಧನ್
ಮಾಜಿ ಶಾಸಕ ಹರ್ಷವರ್ಧನ್
Published on

ಪ್ರಮುಖ ಮುಖ್ಯಾಂಶಗಳು

  • ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ
  • ಮೈಸೂರಿನಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆ
ಮೈಸೂರು: ಸಂವಿಧಾನದಲ್ಲಿ ಮೀಸಲಾತಿ ಮಾತ್ರ ನೀಡಲಾಗಿದ್ದು, ಒಳ ಮೀಸಲಾತಿಗೆ ಅವಕಾಶ ಕಲ್ಪಿಸಿಲ್ಲ. ಹಾಗಾಗಿ ಒಳಮೀಸಲಾತಿ ಜಾರಿಗೆ ತಂದಿದ್ದೇ ತಪ್ಪು ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂವಿಧಾನಕ್ಕೆ ವಿರುದ್ಧವಾಗಿ ಒಳಮೀಸಲಾತಿ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರದ ಕುರ್ಚಿ ಭದ್ರಪಡಿಸಿಕೊಳ್ಳಲು ಅಹಿಂದ ವರ್ಗವನ್ನು ಎರಡು ಮೂರು ಭಾಗ ಮಾಡಿ ಒಳಮೀಸಲಾತಿ ಜಾರಿಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಳ ಮೀಸಲಾತಿ ಜಾರಿ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದರೆ ಸರ್ಕಾರದ ಆದೇಶ ವಜಾ ಆಗುವುದು ನಿಶ್ಚಿತ. ಒಳ ಮೀಸಲಾತಿ ಯಾವ ಆಧಾರದಲ್ಲಿ ಮಾಡಲಾಗಿದೆ ಎಂಬುದನ್ನು ವಿವರಿಸಲು ರಾಜ್ಯ ಸರ್ಕಾರ ಸಿದ್ಧವೇ ಆಗಿಲ್ಲ. ಒಳ ಮೀಸಲಾತಿ ಹಂಚಿಕೆ ಸರಿಯಾಗಿಲ್ಲ. ಒಳ ಮೀಸಲಾತಿ ನೀಡುವ ಸಂದರ್ಭ ಪರಿಶಿಷ್ಟ ಜಾತಿಯನ್ನು 2 ಭಾಗ ಮಾಡಲಾಗಿದ್ದು, ಇದರಿಂದ ಅಲೆಮಾರಿ ಸಮುದಾಯಕ್ಕೆ ತೀವ್ರ ಅನ್ಯಾಯವಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net