ದೇವಾಲಯ ಉದ್ಘಾಟನೆ ಇಂದು

ಹುಣಸೂರು ತಾಲೂಕಿನ ಹರವೆ ಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹೊರನೋಟ.
ಹುಣಸೂರು ತಾಲೂಕಿನ ಹರವೆ ಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹೊರನೋಟ.
Published on

ಪ್ರಮುಖ ಮುಖ್ಯಾಂಶಗಳು

  • ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ
  • ಹರವೆಕಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮ
ಹುಣಸೂರು: ತಾಲೂಕಿನ ಗಾವಡಗೆರೆ ಹೋಬಳಿಯ ಹರವೆಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಲಕ್ಷ್ಮೀ ದೇವಿ(ಮಳಲಿ ಗಿಡ್ಡಮ್ಮ) ದೇವಾಲಯದ ಉದ್ಘಾಟನಾ ಕಾರ್ಯಕ್ರಮ ಏ.15 ರಂದು ನಡೆಯಲಿದೆ.
ಅಂದು 4.30ರಿಂದ 5.30ರ ವರೆಗಿನ ಬ್ರಾಹ್ಮೀ ಮುಹೂರ್ತದಲ್ಲಿ ಪ್ರತಿಷ್ಠಾಪನೆ ವಿಧಿಗಳು ನೆರವೇರಲಿದೆ.
ನಂತರ ಅಮ್ಮನವರಿಗೆ ಸುಪ್ರಭಾತ ಸೇವೆ, ವೇದ ಪಾರಾಯಣ, ಪ್ರಧಾನ ಕಲಶ ಆರಾಧನೆ, ಗಣಪತಿ ಹೋಮ ನವಗ್ರಹ ಹೋಮ, ತತ್ವನ್ಯಾಸ ಹೋಮ, ಮಹಾಪೂರ್ಣಾಹುತಿ, ಕುಂಭಾಭಿಷೇಕ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗವಿದೆ. ಭಕ್ತಾದಿಗಳಿಗೆ ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಧಾರ್ಮಿಕ ಸಭೆ ಆಯೋಜನೆಗೊಂಡಿದೆ. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೇವಸ್ಥಾನದ ಉದ್ಘಾಟನೆಯನ್ನು ಶಾಸಕ ಜಿ.ಡಿ.ಹರೀಶ್ ಗೌಡ ನೆರವೇರಿಸಲಿದ್ದಾರೆ.
16ರ ಬೆಳಗ್ಗೆ 11.45ಕ್ಕೆ ಶುಭ ಅಭಿಜಿನ್ ಲಗ್ನದಲ್ಲಿ ಪೂಜಾ ಕಾರ್ಯಕ್ರಮಗಳು ಆರಂಭವಾಗಿ ಗೋಪುರದ ಶಿಖರ ಕಲಶಕ್ಕೆ ಬಿಂಬಶುದ್ಧಿ ನಡೆಯಲಿವೆ. ಮುಖ್ಯಅತಿಥಿಗಳಾಗಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net