ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ ಉದ್ಘಾಟನೆ ಹಾಗೂ ಶಾಲು ದೀಕ್ಷೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮಂಜುನಾಥ್.ಆರ್.ಗೌಡ, ಸ್ವಾಮಿಗೌಡ, ಕೆ.ಪಿ.ಕಾವೇರಮ್ಮ, ಪ್ರಕಾಶ್, ಹನುಗೋಡು ಪ್ರಭು, ನಾಗೇಂದ್ರ, ದೇವಶೆಟ್ಟಿ, ಬಸವರಾಜ್, ನಾಗರಾಜ್ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ ಉದ್ಘಾಟನೆ ಹಾಗೂ ಶಾಲು ದೀಕ್ಷೆ ಕಾರ್ಯಕ್ರಮ
ಪಿರಿಯಾಪಟ್ಟಣ: ರೈತರ ಪರ ಹೋರಾಟ ಮಾಡಿ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಮ್ಮ ಸಂಘಟನೆಗಳು ಕಾರ್ಯನಿರ್ವಹಿಸಲಿವೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಮಂಜುನಾಥ್.ಆರ್.ಗೌಡ ತಿಳಿಸಿದರು.
ತಾಲೂಕಿನ ಮಾಕೋಡು ಗ್ರಾಮದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ ಉದ್ಘಾಟನೆ ಹಾಗೂ ಶಾಲು ದೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತರಿಗೆ ಆಗುವ ಅನ್ಯಾಯಗಳನ್ನು ತಡೆಯಲು ಈ ಸಂಘವನ್ನು ರೂಪಿಸಿಕೊಂಡು ನಾವೆಲ್ಲರೂ ಒಟ್ಟಾಗಿ ದುಡಿದು ನಮ್ಮ ರೈತರಿಗೆ ನ್ಯಾಯವನ್ನು ಒದಗಿಸಿಕೊಡಬೇಕು ಎಂದರು. ಯಾವುದೇ ಜಾತಿ ಭೇದ ಇಲ್ಲದೆ ನಾವೆಲ್ಲರೂ ಒಂದು ಎಂದು ದುಡಿಯೋಣ ಎಂದರು.
ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಸ್ವಾಮಿಗೌಡ ಮಾತನಾಡಿ, ಸಂಘದ ಸದಸ್ಯರು ಒಟ್ಟುಗೂಡಿ ಸಂಘವನ್ನು ಒಳ್ಳೆಯ ಕೆಲಸ ಕಾರ್ಯಗಳಿಗೆ ವಿನಿಯೋಗಿಸಿಕೊಳ್ಳಬೇಕು ಹಾಗೂ ರೈತರಿಗೆ ಸಿಗುವ ಸವಲತ್ತುಗಳನ್ನು ಒದಗಿಸಿ ಕೊಡಬೇಕು ಎಂದರು.
ತಾಲೂಕು ಮಹಿಳಾ ಅಧ್ಯಕ್ಷೆ ಕೆ.ಪಿ.ಕಾವೇರಮ್ಮ ಸಂಘಟನೆಗೆ ಸೇರ್ಪಡೆಯಾದ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಮುಖಂಡರಾದ ಪ್ರಕಾಶ್, ಹನುಗೋಡು ಪ್ರಭು, ನಾಗೇಂದ್ರ, ದೇವಶೆಟ್ಟಿ, ಬಸವರಾಜ್, ನಾಗರಾಜ್ ಇತರರು ಇದ್ದರು.