ಸೈಬರ್ ಕ್ರೈಂ ಪ್ರಕರಣ ಹೆಚ್ಚಳ : ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಕಳವಳ

 ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ‘ಲೀಗಲ್ ಲೈಮ್ ಲೈಟ್’ ದ್ವಿಭಾಷಾ ಪತ್ರಿಕೆ ಹಾಗೂ ಕ್ರಿಮಿನಾಲಿಸ್ಟಿಕ್ ಫೋರೆನ್ಸಿಕ್ ಕೃತಿಯನ್ನು ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್.  ದಿನೇಶ್ ಕುಮಾರ್ ಬಿಡುಗಡೆ ಮಾಡಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸೀಮಾ ಲಾಟ್ಕರ್, ಡಾ.ಎಂ.ಕೆ. ನಾಗರಾಜ್ ಹಾಗೂ ಇತರರು ಇದ್ದರು.
ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ‘ಲೀಗಲ್ ಲೈಮ್ ಲೈಟ್’ ದ್ವಿಭಾಷಾ ಪತ್ರಿಕೆ ಹಾಗೂ ಕ್ರಿಮಿನಾಲಿಸ್ಟಿಕ್ ಫೋರೆನ್ಸಿಕ್ ಕೃತಿಯನ್ನು ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಬಿಡುಗಡೆ ಮಾಡಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸೀಮಾ ಲಾಟ್ಕರ್, ಡಾ.ಎಂ.ಕೆ. ನಾಗರಾಜ್ ಹಾಗೂ ಇತರರು ಇದ್ದರು.
Published on
ಮೈಸೂರು: ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಪ್ರಸ್ತುತ ಕಾನೂನಿಗೆ ಹೊಸ ಸವಾಲಾಗಿ ಪರಿಣಮಿಸಿದೆ ಎಂದು ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹೇಳಿದರು.
ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜು ಮತ್ತು ಪ್ರೋ ಲೀಗಲ್ ಟ್ರಸ್ಟ್ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ‘ಲೀಗಲ್ ಲೈಮ್ ಲೈಟ್’ ದ್ವಿಭಾಷಾ ಪತ್ರಿಕೆ ಹಾಗೂ ಡಾ.ಎಂ.ಕೆ. ನಾಗರಾಜ್ ರಚನೆಯ ಕ್ರಿಮಿನಾಲಿಸ್ಟಿಕ್ ಫೋರೆನ್ಸಿಕ್ ಕೃತಿ ಬಿಡುಗಡೆ ಮಾಡಿ ಮಾತನಾಡಿದರು.
ಜಾರ್ಖಂಡ್‌ನ ಜಾಮ್ತಾರದಲ್ಲಿ ಕುಳಿತು ಸಾಕಷ್ಟು ಜನರು ಸೈಬರ್ ಕ್ರೈಂ ನಡೆಸುತ್ತಿರುವುದು ಕಂಡು ಬರುತ್ತಿದೆ. ಇವರು ಜನರಿಂದ ಮೊಬೈಲ್ ಒಟಿಪಿ ಪಡೆದು ಕ್ಷಣಮಾತ್ರದಲ್ಲಿ ಜನರ ಬ್ಯಾಂಕ್ ಖಾತೆಯ ಸಂಪೂರ್ಣ ಹಣವನ್ನು ಖಾಲಿ ಮಾಡುತ್ತಿದ್ದಾರೆ. ಇದರ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯಿಂದ ಕಾನೂನು ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತಿದ್ದೇವೆ. ವಿವಿಧ ಪ್ರಕರಣ ಗಳಲ್ಲಿ ಭಾಗಿಯಾಗಿರುವ ವ್ಯಕಿಗಳಿಗೆ ಈ ಹಿಂದೆ ಸಮನ್ಸ್ ಜಾರಿ ಮಾಡಲು ಸಾಕಷ್ಟು ಸಮಸ್ಯೆಗಳು ಎದುರಾಗುತಿದ್ದವು. ಹಲವಾರು ಸಂದರ್ಭಗಳಲ್ಲಿ ಸಮನ್ಸ್ ಜಾರಿ ಆಗುತ್ತಿರಲಿಲ್ಲ. ಆದರೆ, ಇದೀಗ ಸಮನ್ಸ್ ಮತ್ತು ಇತರ ಕಾನೂನು ಪ್ರಕ್ರಿಯೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಕಳುಹಿಸಲು ಮತ್ತು ಟ್ರಾೃಕ್ ಮಾಡಲು ಎನ್-ಸ್ಟೆಪ್ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗಿದೆ. ಕಾನೂನು ಸೇವೆಯಲ್ಲೂ ಮಾಹಿತಿ ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದೆ ಎಂದರು.
ದೇಶದಲ್ಲಿ 140 ಕೋಟಿ ಜನಸಂಖ್ಯೆ ಇದೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರು ಇದ್ದರೂ ದೇಶದಲ್ಲಿ ಸೆಬಿಗೆ ಸಂಬಂಧಿಸಿದ ಪ್ರಕರಣಗಳು ಕಂಡು ಬರುತ್ತಿರುವುದು ಬಹಳ ಕಡಿಮೆ. ಸೆಬಿ ಷೇರುಮಾರುಕಟ್ಟೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್,
ಲೇಖಕ ಡಾ.ಎಂ.ಕೆ. ನಾಗರಾಜ್, ಹಿರಿಯ ನ್ಯಾಯವಾದಿ ಕೆ.ದಿವಾಕರ್, ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಎಂ.ಬಿ. ಜಯರಾಮ್, ಪ್ರಕಾಶಕ ಸಂಸ್ಕೃತಿ ಸುಬ್ರಹ್ಮಣ್ಯ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net