ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಗುರುವಾರ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು
ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಗುರುವಾರ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು
Published on

ಪ್ರಮುಖ ಮುಖ್ಯಾಂಶಗಳು

  • ಭಾರತ ವಿದ್ಯಾರ್ಥಿ ಫೆಡರೇಷನ್ ಪ್ರತಿಭಟನೆ
  • ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ಪ್ರತಿಭಟನಾಕಾರರು, ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
  • ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಕಳಪೆ ಮಟ್ಟದ್ದಾಗಿದೆ. ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಬೇಕು
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ಪ್ರತಿಭಟನಾಕಾರರು, ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ವಿಶ್ವವಿದ್ಯಾಲಯ ರಾಜ್ಯದ ಪ್ರತಿಷ್ಠಿತ ವಿವಿ. ಇಲ್ಲಿ ವಿದ್ಯಾಭ್ಯಾಸ ಮಾಡಲು ಹೊರ ಜಿಲ್ಲೆ, ರಾಜ್ಯ, ವಿದೇಶದಿಂದ ಬರುತ್ತಾರೆ. ಆ ವಿದ್ಯಾರ್ಥಿಗಳೆಲ್ಲ ವಿಶ್ವವಿದ್ಯಾಲಯದ ವಸತಿನಿಲಯಗಳನ್ನೇ ಅವಲಂಬಿಸಿದ್ದಾರೆ. ಆದರೆ, ವಸತಿ ನಿಲಯಗಳಲ್ಲಿ ಮೂಲ ಸೌಕರ್ಯಗಳು ಸರಿಯಾಗಿಲ್ಲ. ಸರಿಯಾದ ಸ್ವಚ್ಛತೆ ಇಲ್ಲ. ಸೂಕ್ತವಾಗಿ ಸ್ವಚ್ಛತೆ ಮಾಡದ ಕಾರಣ ಹಲವು ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಜತೆಗೆ ಕುಡಿಯುವ ನೀರಿನ ವ್ಯವಸ್ಥೆಯೂ ಸರಿಯಾಗಿಲ್ಲ. ವಿದ್ಯಾರ್ಥಿಗಳು ಹೊರಗಡೆಯಿಂದ ನೀರು ತಂದು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಗೃಹಗಳಂತು ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಿವೆ. ಇದರಿಂದ ಶೌಚಗೃಹಗಳನ್ನು ಉಪಯೋಗಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಕಳಪೆ ಮಟ್ಟದ್ದಾಗಿದೆ. ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಬೇಕು. ಆದರೆ ಊಟದಲ್ಲಿ ತರಕಾರಿ, ಕಾಳು ಧಾನ್ಯಗಳೇ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಹಲವು ತೊಂದರೆಗಳಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸದ ಮೇಲೆ, ಆರೋಗ್ಯದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಿಗೆ ಕುಡಿಯುವ ನೀರು, ಶೌಚಗೃಹ ಸ್ವಚ್ಛತೆ, ಪೌಷ್ಟಿಕ ಆಹಾರ ನೀಡಬೇಕು. ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಗೀಜರ್‌ಗಳಲ್ಲಿ ಕರೆಂಟ್ ಶಾಕ್ ಹೊಡೆಯುತ್ತಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ನ ಮೈಸೂರು ವಿವಿ ಘಟಕದ ಅಧ್ಯಕ್ಷ ಚಿರಾಗ್ ಎಸ್.ಕೆ.ಮೂರ್ತಿ, ರಾಜ್ಯ ಸಮಿತಿ ಸದಸ್ಯ ಅಭಿ, ಜಿಲ್ಲಾ ಕಾರ್ಯದರ್ಶಿ ಪ್ರಜ್ವಲ್, ಜಿಲ್ಲಾಧ್ಯಕ್ಷ ಭರತ್, ಜೀವನ್, ಪ್ರಿಯ, ಗಜೇಂದ್ರ, ರಾಜೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net