ಮಂಡಿಮೊಹಲ್ಲಾದ ಸಂಜಯ್ ಕುಮಾರ್, ಇಲವಾಲದ ಪಿ.ಪಿ. ವಿನೋದ್, ಪಡುವಾರಹಳ್ಳಿಯ ಲಿಖಿತ್ ಕುಮಾರ್ ಬಂಧಿತರು. ಆರೋಪಿಗಳು ಕಾರಿನಲ್ಲಿ ಕುಳಿತು ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದರು. ಆರೋಪಿಗಳಿಂದ 1 ಬೆನ್ಸ್ ಕಾರು, 15,900 ರೂ. ನಗದು, 3 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.