ಅತಿಥಿ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ

ಪಿರಿಯಾಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಅತಿಥಿ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣ ಕಾರ್ಯಕ್ರಮವನ್ನು ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ಉದ್ಘಾಟಿಸಿದರು. ಬಿಇಓ ರವಿ ಪ್ರಸನ್ನ, ರವಿ, ಪ್ರವೀಣ್ ಕುಮಾರ್ ಇತರರು ಇದ್ದರು.
ಪಿರಿಯಾಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಅತಿಥಿ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣ ಕಾರ್ಯಕ್ರಮವನ್ನು ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ಉದ್ಘಾಟಿಸಿದರು. ಬಿಇಓ ರವಿ ಪ್ರಸನ್ನ, ರವಿ, ಪ್ರವೀಣ್ ಕುಮಾರ್ ಇತರರು ಇದ್ದರು.
Published on

ಪಿರಿಯಾಪಟ್ಟಣ:

ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ ಎಂದು ಬಿಇಒ ರವಿ ಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದರು.

ಪಿರಿಯಾಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಜ್ಞಾನದೀಪ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಆಯ್ಕೆಯಾದ ಅತಿಥಿ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರದ ಜತೆಗೆ ಸಂಘ-ಸಂಸ್ಥೆಗಳ ಕೊಡುಗೆ ಸಹ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಾಂತರ ಪ್ರದೇಶದ ಆಯ್ದ ಸರ್ಕಾರಿ ಶಾಲೆಗಳಿಗೆ ಸಂಸ್ಥೆಯಿಂದ ಅತಿಥಿ ಶಿಕ್ಷಕರನ್ನು ನಿಯೋಜಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕ ವಾತಾವರಣ ಕಲ್ಪಿಸುತ್ತಿರುವುದು ಮಾದರಿ ಎಂದರು.
ಯೋಜನೆ ಕೊಡಗು ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ಮಾತನಾಡಿ, ಸಂಸ್ಥೆಯ ವತಿಯಿಂದ ಶೈಕ್ಷಣಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಿಕೊಡಲಾಗುತ್ತಿದೆ. ಪೀಠೋಪಕರಣ ವಿತರಣೆ, ಕಟ್ಟಡ ದುರಸ್ತಿ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಸಂಸ್ಥೆಯಿಂದ ಅನುದಾನ ನೀಡಲಾಗುತ್ತಿದೆ. ಇದರ ಜತೆಗೆ ಸ್ಥಳೀಯ ಅರ್ಹರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿ ಅವರಿಗೆ ವೇತನ ನೀಡುತ್ತಿದೆ ಎಂದು ವಿವರಿಸಿದರು. ಯೋಜನಾಧಿಕಾರಿ ರವಿ ಮಾತನಾಡಿದರು. ಸಂಸ್ಥೆಯ ಎಂಐಎಸ್ ಯೋಜನಾಧಿಕಾರಿ ಪ್ರವೀಣ್ ಕುಮಾರ್, ಕಚೇರಿ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net