ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ

ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಗರಳಪುರಿ ಉತ್ಸವ ಹಿನ್ನೆಲೆ ಚಿತ್ರಕಲಾ ಸ್ಪರ್ಧೆಯನ್ನು ವಿವಿಧ ಗಣ್ಯರು ವೀಕ್ಷಿಸುತ್ತಿರುವುದು. ಶಾಸಕ ದರ್ಶನ್, ರಾಹುಲ್ ಜಾರಕಿಹೊಳಿ, ಮಂಜುನಾಥಗೌಡ, ಚಂದನ್ ಗೌಡ ಇತರರು ಇದ್ದರು.
ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಗರಳಪುರಿ ಉತ್ಸವ ಹಿನ್ನೆಲೆ ಚಿತ್ರಕಲಾ ಸ್ಪರ್ಧೆಯನ್ನು ವಿವಿಧ ಗಣ್ಯರು ವೀಕ್ಷಿಸುತ್ತಿರುವುದು. ಶಾಸಕ ದರ್ಶನ್, ರಾಹುಲ್ ಜಾರಕಿಹೊಳಿ, ಮಂಜುನಾಥಗೌಡ, ಚಂದನ್ ಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ದರ್ಶನ್ ಧ್ರುವ ನಾರಾಯಣ
ನಂಜನಗೂಡು: ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಐತಿಹಾಸಿಕ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರಥಮ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗಿರುವ ಗರಳ ಪುರಿ ಉತ್ಸವ ಪ್ರಯುಕ್ತ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಗೆ ನೂತನವಾಗಿ ನಿರ್ಮಿಸಿರುವ ಸಸ್ಯಕಾಸಿ ಉದ್ಘಾಟಿಸಿ ಮಾತನಾಡಿದರು.
ನಮ್ಮ ತಾಯಿ ಚಿಕ್ಕವಯಸ್ಸಿನಲ್ಲಿ ಚಿತ್ರಕಲೆ ಕಲಿಸುತ್ತಿದ್ದರು. ಸ್ಪರ್ಧೆಗಳಲ್ಲಿ ನಮ್ಮನ್ನು ಭಾಗವಹಿಸುವಂತೆ ಎಲ್ಲ ಕಡೆ ಕರೆದುಕೊಂಡು ಹೋಗುತ್ತಿದ್ದರು. ಈ ಕಾರ್ಯಕ್ರಮವನ್ನು ನೋಡುತ್ತಿದ್ದರೆ ನನ್ನ ಬಾಲ್ಯದ ನೆನಪು ಬರುತ್ತಿದೆ ಎಂದರು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ, ಕಲೆ, ಯೋಗ, ಜಾನಪದ ಸೇರಿದಂತೆ ಹಲವು ಕಾರ್ಯಕ್ರಮವನ್ನು ಗರಳ ಪುರಿ ಉತ್ಸವದಲ್ಲಿ ಆಯೋಜಿಸಿರುವುದು ಸಂತಸವಾಗಿದೆ. ಒಂದು ಚಿತ್ರ 100 ಪದಗಳಿಗೆ ಸಮ. ಶಾಸಕ ದರ್ಶನ್ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಮಕ್ಕಳು ಒಳ್ಳೆಯ ಭಾವನೆಗಳನ್ನು ಬೆಳೆಸಿಕೊಳ್ಳುವ ಮೂಲಕ ಮುಂದೆ ಬರಬೇಕಾಗಿದೆ. ಆರ್ಥಿಕವಾಗಿ ಮುಂದೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ತಿಳಿಸಿಕೊಟ್ಟಿದ್ದಾರೆ. ಇಂದಿನ ಯುವಕರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಎಂದರು.
ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಯುವ ಶಾಸಕರಿಗೆ ಮುಂದಿನ ದಿನಗಳಲ್ಲಿ ಬೆಂಬಲ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಚಿತ್ರ ಬಿಡಿಸಿದ ಎಲ್ಲ ಮಕ್ಕಳಿಗೆ ಯೂಥ್ ಕಾಂಗ್ರೆಸ್ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಚಂದನ್ ಗೌಡ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ವಿತರಿಸಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎಂ ಶಂಕರ್, ಕುರಹಟ್ಟಿ ಮಹೇಶ್, ಕಾಡ ಅಧ್ಯಕ್ಷ ಮರಿಸ್ವಾಮಿ, ಭೋವಿ ಸಂಘದ ರಾಜ್ಯಾಧ್ಯಕ್ಷ ರಾಮಪ್ಪ, ನಗರಸಭಾ ಮಾಜಿ ಅಧ್ಯಕ್ಷ ಶ್ರೀಕಂಠ, ಮಾರುತಿ, ಎಸ್.ಸಿ. ಬಸವರಾಜು ಇತರರು ಇದ್ದರು.
23 ಟಿರಿಜ ಟಿತಿ 02
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net