ಕ್ರೀಡಾಪಟುಗಳಿಗೆ ಸೌಲಭ್ಯ ಒದಗಿಸುವುದು ಅವಶ್ಯ

ಪಿರಿಯಾಪಟ್ಟಣ ತಾಲೂಕಿನ ಚಿಟ್ಟೆನಹಳ್ಳಿ ಗ್ರಾಮದ ಬಳಿ ಇರುವ ಪಿರಿಯಾಪಟ್ಟಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಆವರಣದಲ್ಲಿ ಭಾನುವಾರ ಕಾಂಪೌಂಡ್ ಮತ್ತು ವಾಣಿಜ್ಯ ಮಳಿಗೆ ಕಟ್ಟಡವನ್ನು ಮಾಜಿ ಶಾಸಕ ಕೆ.ಮಹದೇವ್ ಉದ್ಘಾಟಿಸಿದರು. ಕೆ.ರಮೇಶ್, ಪಿ.ಬಿ.ಪೊನ್ನಪ್ಪ, ಸಿ.ಎನ್.ವಿಜಯ್, ಟಿ.ಮಲ್ಲಿಕಾರ್ಜುನ, ಎಚ್.ಕೆ.ಮಂಜುನಾಥ್ ಇದ್ದರು.
ಪಿರಿಯಾಪಟ್ಟಣ ತಾಲೂಕಿನ ಚಿಟ್ಟೆನಹಳ್ಳಿ ಗ್ರಾಮದ ಬಳಿ ಇರುವ ಪಿರಿಯಾಪಟ್ಟಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಆವರಣದಲ್ಲಿ ಭಾನುವಾರ ಕಾಂಪೌಂಡ್ ಮತ್ತು ವಾಣಿಜ್ಯ ಮಳಿಗೆ ಕಟ್ಟಡವನ್ನು ಮಾಜಿ ಶಾಸಕ ಕೆ.ಮಹದೇವ್ ಉದ್ಘಾಟಿಸಿದರು. ಕೆ.ರಮೇಶ್, ಪಿ.ಬಿ.ಪೊನ್ನಪ್ಪ, ಸಿ.ಎನ್.ವಿಜಯ್, ಟಿ.ಮಲ್ಲಿಕಾರ್ಜುನ, ಎಚ್.ಕೆ.ಮಂಜುನಾಥ್ ಇದ್ದರು.
Published on
ಪಿರಿಯಾಪಟ್ಟಣ: ಕ್ರೀಡಾ ಚಟುವಟಿಕೆಗೆ ಪೂರಕ ಮೂಲ ಸೌಲಭ್ಯ ಒದಗಿಸಿದಲ್ಲಿ ಹೆಚ್ಚಿನ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ ಎಂದು ಮಾಜಿ ಶಾಸಕ ಕೆ.ಮಹದೇವ್ ಅಭಿಪ್ರಾಯಪಟ್ಟರು.
ತಾಲೂಕಿನ ಚಿಟ್ಟೆನಹಳ್ಳಿ ಗ್ರಾಮದ ಬಳಿ ಇರುವ ಪಿರಿಯಾಪಟ್ಟಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಆವರಣದಲ್ಲಿ ಭಾನುವಾರ ಕಾಂಪೌಂಡ್ ಮತ್ತು ವಾಣಿಜ್ಯ ಮಳಿಗೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಆರಂಭವಾಗಿರುವ ಈ ಸಂಘ ಮತ್ತಷ್ಟು ಅಭಿವೃದ್ಧಿ ಕಾಣಬೇಕು. ನನ್ನ ಅಧಿಕಾರ ಅವಧಿಯಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡಲಾಗಿತ್ತು. ಈ ಹಿಂದೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಕಟ್ಟಡದ ಹೆಚ್ಚುವರಿ ಕಾಮಗಾರಿಗೆ ಅನುದಾನ ನೀಡಿದ್ದರಿಂದ ಕಟ್ಟಡ ಸಂಪೂರ್ಣಗೊಂಡಿದೆ ಎಂದರು.
ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಆವರಣದಲ್ಲಿ ಬಾಕಿ ಉಳಿದಿರುವ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲು ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಅವರಿಗೆ ಮನವಿ ಮಾಡಲಾಗಿತ್ತು. ಮಂಜೇಗೌಡ ರವರು 5 ಲಕ್ಷ ರೂ. ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಅನುದಾನ ನೀಡಿರಲಿಲ್ಲ. ಈಗ ಮತ್ತೊಮ್ಮೆ ಮನವಿ ಸಲ್ಲಿಸಿ ಎಂದರು.
ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕೆ.ರಮೇಶ್ ಮಾತನಾಡಿ, ಪಿರಿಯಾಪಟ್ಟಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ನೂರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದ್ದು, ನಮ್ಮ ಅವಧಿಯಲ್ಲಿ ಕಟ್ಟಡ ನಿರ್ಮಾಣ, ಕಾಂಪೌಂಡ್ ನಿರ್ಮಾಣ ಸೇರಿದಂತೆ ದಾಖಲಾತಿಗಳ ದಾಖಲೀಕರಣವನ್ನು ಕೂಡ ಮುಗಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಆವರಣದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಸ್ವಿಮ್ಮಿಂಗ್ ಪೂಲ್ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಮಹದೇವ ಅವರನ್ನು ಸಂಘದಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪಿ.ಬಿ.ಪೊನ್ನಪ್ಪ, ಕಾರ್ಯದರ್ಶಿ ಸಿ.ಎನ್.ವಿಜಯ್, ಖಜಾಂಚಿ ಟಿ.ಮಲ್ಲಿಕಾರ್ಜುನ, ಸಹ ಕಾರ್ಯದರ್ಶಿ ಪಿ.ಎಸ್.ಹರೀಶ್, ನಿರ್ದೇಶಕರಾದ ಎಸ್.ಎನ್.ಭುಜಂಗ, ವಿ.ಎನ್. ಜ್ಯೋತಿ ಗೌಡ, ಕೆ.ಆರ್.ಕೆಂಪಣ್ಣ, ಸಿ.ಕೆ.ಗೌರೀಶ್.ಎನ್.ಸಂತೋಷ್, ಪಿ.ಎಂ.ವಿನೋದ್, ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net