ಜಲ ಜೀವನ್ ಮಿಷನ್ ಯೋಜನಾವಧಿ ವಿಸ್ತರಣೆ: ಸಂಸದ ಯದುವೀರ್ ಸ್ವಾಗತ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
Published on

ಪ್ರಮುಖ ಮುಖ್ಯಾಂಶಗಳು

  • ‘ಜಲ ಜೀವನ್ ಮಿಷನ್’ ಯೋಜನೆಯನ್ನು ಮರು ಸಂಘಟಿಸುವ ಜಲಶಕ್ತಿ ಸಚಿವಾಲಯದ ಪ್ರಸ್ತಾವನೆಗೆ ಅನುಮೋದನೆ
ಮೈಸೂರು: ಜಲ ಜೀವನ್ ಮಿಷನ್ (ಜೆಜೆಎಂ) ಯೋಜನಾವಧಿಯನ್ನು 2028ರ ಡಿಸೆಂಬರ್‌ರ ವರೆಗೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಾಗತಿಸಿದ್ದಾರೆ.
ಜೆಜೆಎಂ 2.0 ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು ಮರು ರಚಿಸುವ ಮೂಲಕ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಸಂಪುಟ ಸಭೆಯು, ಸುಸ್ಥಿರ ಗ್ರಾಮೀಣ ಪೈಪ್‌ಲೈನ್ ಕುಡಿಯುವ ನೀರು ಪೂರೈಕೆಗಾಗಿ ‘ಜಲ ಜೀವನ್ ಮಿಷನ್’ ಯೋಜನೆಯನ್ನು ಮರು ಸಂಘಟಿಸುವ ಜಲಶಕ್ತಿ ಸಚಿವಾಲಯದ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ಈ ನಿರ್ಧಾರದಿಂದ ಯೋಜನೆಯ ಗಮನವು ಕೇವಲ ಮೂಲಸೌಕರ್ಯ ನಿರ್ಮಾಣ ಮಾತ್ರ ಆಗಿರುವುದಿಲ್ಲ. ‘ಸೇವಾ ವಿತರಣೆ’ಯೂ ಆಗಿರಲಿದೆ. ಕುಡಿಯುವ ನೀರು ಪೂರೈಕೆಗೆ ಹೆಚ್ಚು ಆದ್ಯತೆ ನೀಡಲಿದೆ.
ಈ ನಿಟ್ಟಿನಲ್ಲಿ ನಾನು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಕ್ರಿಯಾ ಯೋಜನೆ ರೂಪಿಸಲು ಸೂಚಿಸುತ್ತೇನೆ. ನಮ್ಮ ಗ್ರಾಮೀಣ ಭಾಗದ ಜನರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net