ತಿ.ನರಸೀಪುರದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಚೆನ್ನಮ್ಮ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಿ.ಬಿ.ಹುಂಡಿ ಚಿನ್ನಸ್ವಾಮಿ, ಮರಿಸ್ವಾಮಿ, ಮಹದೇವ, ಜಯರಾಮು, ರೇವಣ್ಣ ಇತರರು ಇದ್ದರು.
ತಿ.ನರಸೀಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಪಟ್ಟಣದ ಜಾತ್ಯತೀತ ಜನತಾದಳ ಕಚೇರಿಯಲ್ಲಿ ಭಾನುವಾರ ಮುಖಂಡರು ಹಾಗೂ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸಂತಾಪ ಸಭೆಯಲ್ಲಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ನಿಮಿಷ ಮೌನಾಚಾರಣೆ ಮೂಲಕ ಸಂತಾಪ ಸೂಚಿಸಿದರು.
ಜೆಡಿಎಸ್ ಕ್ಷೇತ್ರಾಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಾರ್ವಜನಿಕ ಹಾಗೂ ರಾಜಕೀಯ ಜೀವನದಲ್ಲಿ ಸದಾ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ದುಃಖಿತ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.
ದೊಡ್ಡೆಬ್ಬಾಗಿಲು ಪಿಎಸಿಸಿಎಸ್ ಅಧ್ಯಕ್ಷ ಕೃಷ್ಣಾಪುರ ಮರಿಸ್ವಾಮಿ, ಜೆಡಿಎಸ್ ಮುಖಂಡರಾದ ಕನ್ನಹಳ್ಳಿ ಮಹದೇವ, ಕಟ್ಟೇಪುರ ಸಿದ್ದಪ್ಪ, ತಿರುಮಕೂಡಲು ಜಯರಾಮು, ಕಾರ್ ರೇವಣ್ಣ, ಸುನೀಲ್, ಮಹದೇವಸ್ವಾಮಿ, ದ್ವಾರಕೀಶ್ ಇತರರು ಇದ್ದರು.