ಸರ್ಕಾರದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ

ಕೆ.ಆರ್.ನಗರದಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದರು. ಜಿ.ಡಿ.ಹರೀಶ್‌ಗೌಡ, ಸಾ.ರಾ.ಮಹೇಶ್, ಕೆ.ವಿವೇಕಾನಂದ, ಸಿ.ಎನ್.ಮಂಜೇಗೌಡ, ಅಶ್ವಿನ್ ಕುಮಾರ್, ಕೆ.ಮಹದೇವ್ ಇದ್ದರು.
ಕೆ.ಆರ್.ನಗರದಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದರು. ಜಿ.ಡಿ.ಹರೀಶ್‌ಗೌಡ, ಸಾ.ರಾ.ಮಹೇಶ್, ಕೆ.ವಿವೇಕಾನಂದ, ಸಿ.ಎನ್.ಮಂಜೇಗೌಡ, ಅಶ್ವಿನ್ ಕುಮಾರ್, ಕೆ.ಮಹದೇವ್ ಇದ್ದರು.
Published on
ಕೆ.ಆರ್.ನಗರ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮೀತಿ ಮೀರಿದೆ. ಇಂತಹ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಪಟ್ಟಣದ ಡಾ.ರಾಜಕುಮಾರ್ ಬಾನಂಗಳದಲ್ಲಿ ಭಾನುವಾರ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸಿಎಂ, ನೀನು ಸಿಎಂ ಎಂದು ಪ್ರತಿನಿತ್ಯ ಜಟಾಪಟಿ ನಡೆಯತ್ತಿರುವುದೇ ಕಾಂಗ್ರೆಸ್ ಪಕ್ಷದವರ ಮೂರು ವರ್ಷಗಳ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.
ಪ್ರಾದೇಶಿಕ ಪಕ್ಷ ಜೆಡಿಎಸ್ 18 ಸೀಟು ಬಂದಿದೆ ಎನ್ನುವ ನಿಮ್ಮ ಕಾಂಗ್ರೆಸ್ ಪಕ್ಷ ದೇಶದ ಎಷ್ಟು ರಾಜ್ಯದಲ್ಲಿ ಅಧಿಕಾರಲ್ಲಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರು ಎಂಬುದು ಗೊತ್ತಾಗುತ್ತಿಲ್ಲ. ಆದರೆ, ಜೆಡಿಎಸ್‌ನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಹೈಕಮಾಂಡ್ ಎಂದರು.
ರಾಜ್ಯ ಸರ್ಕಾರ ಮಾಧ್ಯಮದವರನ್ನು ವಿಧಾನಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಸರ್ಕಾರದ ಭ್ರಷ್ಟಾಚಾರದ ಸುದ್ದಿ ಬಿತ್ತರಿಸುತ್ತಾರೆ ಎಂಬ ಕಾರಣಕ್ಕೆ ಮಾಧ್ಯಮದವರ ಮೇಲೆ ಈ ರೀತಿಯ ಎಮರ್ಜೆನ್ಸಿ ತಂದಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಡೀಕರಿಸಲು ಪರಿಶಿಷ್ಟ ಜಾತಿ ಹಾಗೂ ಪಂಗಡದ ಎಸ್‌ಇಪಿ ಮತ್ತು ಟಿಎಸ್‌ಪಿ ಹಣ ಬಳಸಿಕೊಂಡಿದ್ದೀರಿ. ರಾಜ್ಯದ ಗುತ್ತಿಗೆದಾರರ 37 ಸಾವಿರ ಕೋಟಿ ರೂ. ನೀಡದೆ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ತಂದಿದ್ದೀರಿ. ಶಾಸಕರಿಗೆ ಅನುದಾನ ಕೊಡಲು ನಿಮ್ಮ ಸರ್ಕಾರದಲ್ಲಿ ಹಣವಿಲ್ಲ ಎಂದು ನಿಮ್ಮ ಪಕ್ಷದ ಶಾಸಕರೇ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ಮೂರು ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಅಂಜದೆ ಕಾರ್ಯಕರ್ತರನ್ನು ಬಲಪಡಿಸಲು ರಾಜ್ಯ ಸುತ್ತುತ್ತಿದ್ದಾರೆ. ಜೆಡಿಎಸ್ ಹಳೇ ಮೈಸೂರು ಭಾಗದಲ್ಲಿ ಮಾತ್ರವಲ್ಲದೆ ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿದೆ ಎಂದರು.
ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು ಕಾರ್ಯಕರ್ತರೇ ಪಕ್ಷದ ಜೀವಾಳವಾಗಿದ್ದಾರೆ. ಯಾವುದೇ ಆತಂಕಪಡದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ ಎಂದರು.
ವಿಧಾನಪರಿಷತ್ ಸದಸ್ಯರಾದ ಕೆ.ವಿವೇಕಾನಂದ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಕೆ.ಮಹದೇವ್, ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್.ಚನ್ನಬಸಪ್ಪ, ಮಾಜಿ ಸದಸ್ಯರಾದ ಅಚ್ಯುತಾನಂದ್, ಅಮಿತ್ ವಿ.ದೇವರಹಟ್ಟಿ. ಸಿ.ಜೆ.ದ್ವಾರಕೀಶ್, ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಡಾ.ಸಾ.ರಾ.ಧನುಷ್, ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಕುಮಾರ್, ವಕ್ತಾರ ಕೆ.ಎಲ್.ರಮೇಶ್, ಯುವ ಜೆಡಿಎಸ್ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಕಗ್ಗರೆ ಕುಚೇಲ, ಪುರಸಭೆ ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಗೀತಾ ಮಹೇಶ್, ಮಾಜಿ ಸದಸ್ಯರಾದ ಸಂತೋಷ್‌ಗೌಡ, ಗಿರೀಶ್, ಸುಬ್ರಮಣ್ಯ, ರಾಜಾ ಶ್ರೀಕಾಂತ್, ಉಮೇಶ್, ಮಂಜುಳಾ ಚಿಕ್ಕವೀರು, ಮೆಹಬೂಬ್ ಖಾನ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net