ಕೇಂದ್ರ ಸರ್ಕಾರ ಅನೇಕ ಉದ್ಯೋಗವಕಾಶವನ್ನು ಸೃಷ್ಟಿಸುತ್ತಿದೆ. ಆದರೆ ಕನ್ನಡ ಭಾಷೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಅನ್ಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಆಗದೆ, ಉದ್ಯೋಗಗಳಿಂದ ವಂಚನೆಗೆ ಒಳಗಾಗುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಬಹಳಷ್ಟು ಅನ್ಯಾಯವಾದಂತಾಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೂಡಲೇ ಹಕ್ಕೋತ್ತಾಯವನ್ನು ಮಾಡುವ ಮೂಲಕ ಕೇಂದ್ರ ಸರ್ಕಾರದ ಉದ್ಯೋಗದ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಮಾಡುವಂತೆ ಆಗ್ರಹಿಸಬೇಕೆಂದು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.