ಕಬಿನಿ ಬಳಕೆದಾರರ ಸಂಘ ‘ಅವಿಶ್ವಾಸ ನಿರ್ಣಯಕ್ಕೆ ಸೋಲು’

ಕಬಿನಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷರಾಗಿ ಮಹದೇವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ಬಸಪ್ಪ ಮುಂದುವರಿದ ಹಿನ್ನೆಲೆಯಲ್ಲಿ ಮಹದೇವಪ್ಪ ಸ್ನೇಹ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು. ವಾಟಾಳು ಮಠದ ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ಶ್ರೀಷಡಕ್ಷರ ದೇಶಿಕೇಂದ್ರ ಸ್ವಾಮೀಜಿ ಇತರರು ಇದ್ದರು.
ಕಬಿನಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷರಾಗಿ ಮಹದೇವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ಬಸಪ್ಪ ಮುಂದುವರಿದ ಹಿನ್ನೆಲೆಯಲ್ಲಿ ಮಹದೇವಪ್ಪ ಸ್ನೇಹ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು. ವಾಟಾಳು ಮಠದ ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ಶ್ರೀಷಡಕ್ಷರ ದೇಶಿಕೇಂದ್ರ ಸ್ವಾಮೀಜಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Kabini Users Association
ತಿ.ನರಸೀಪುರ: ಸತ್ಯ ಮತ್ತು ಪ್ರಾಮಾಣಿಕತೆಗೆ ಅಂತಿಮವಾಗಿ ಜಯ ಸಿಗುತ್ತದೆ ಎಂಬುದಕ್ಕೆ ಕಬಿನಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿರುವುದೇ ಸಾಕ್ಷಿ ಎಂದು ವಾಟಾಳು ಮಠದ ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಅಧ್ಯಕ್ಷ ಚೌಹಳ್ಳಿ ಮಹದೇವಪ್ಪ ಹಾಗೂ ಉಪಾಧ್ಯಕ್ಷ ಬಿ.ಸಿ. ಬಸಪ್ಪ ವಿರುದ್ಧ ತರಲಾಗಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾದ ಹಿನ್ನೆಲೆಯಲ್ಲಿ ಚೌಹಳ್ಳಿ ಮಹದೇವಪ್ಪ ಹಾಗೂ ಬಿ.ಸಿ.ಬಸಪ್ಪ ಅವರಿಗೆ ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಲವಾರ-ಮುಡುಕನಪುರ ಮಠದ ಶ್ರೀಷಡಕ್ಷರ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಮಹದೇವಪ್ಪ ಅವರು ಈ ಹಿಂದೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೂ ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯದೆ ಸಿಕ್ಕಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ ಮಾತನಾಡಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸ್ಥಾನ ಅತ್ಯಂತ ಜವಾಬ್ದಾರಿಯುತವಾದದ್ದು. ಸಣ್ಣಪುಟ್ಟ ರಾಜಕಾರಣಗಳನ್ನು ಬದಿಗೊತ್ತಿ ರೈತರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಚೌಹಳ್ಳಿ ಮಹದೇವಪ್ಪ, ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಕೆಲವರು ಷಡ್ಯಂತ್ರ ರೂಪಿಸಿ ನಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಆದರೆ ಸದಸ್ಯರ ಬೆಂಬಲ ಹಾಗೂ ಸತ್ಯ ನಮ್ಮ ಪರವಾಗಿದ್ದರಿಂದ ಆ ಪ್ರಯತ್ನ ವಿಫಲವಾಯಿತು. ಈಗ ಮತ್ತೆ ಅಧಿಕಾರ ನಮ್ಮ ಬಳಿಯೇ ಉಳಿದಿದ್ದು, ಅಧಿಕಾರ ಇರುವವರೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹಿರಿಯೂರು ನವೀನ್, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಎಂ.ಆರ್. ಪ್ರಕಾಶ್, ನಿವೃತ್ತ ಮುಖ್ಯೋಪಾಧ್ಯಾಯ ಪುಟ್ಟ ಬುದ್ಧಿ, ಉಪನ್ಯಾಸಕ ಮೂಗೂರು ಕುಮಾರಸ್ವಾಮಿ, ಹೆಳವರ ಹುಂಡಿ ಮೂರ್ತಿ, ತೊಂಟೇಶ್, ಪೂಜಿತ್ ಮೆಡಿಕಲ್ ಕುಮಾರ್, ಓಂ ಗುರು, ಕಾರ್ ಮಲ್ಲಪ್ಪ, ಪುರಸಭೆ ಮಾಜಿ ಸದಸ್ಯ ಎಸ್.ಕೆ. ಕಿರಣ್, ಕುರುಬೂರು ಕೆ.ಎಂ.ಶಾಂತರಾಜು, ಕೆಬ್ಬೇಹುಂಡಿ ಸೋಮಶೇಖರ್, ನಟರಾಜು, ನಾಗೇಶ್, ಕಿರಗಸೂರು ಮಹದೇವಸ್ವಾಮಿ, ನಾಗಪ್ಪ, ನಿಂಗಪ್ಪ ಸೇರಿದಂತೆ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net