ಮೈಸೂರಿನಲ್ಲಿ ಕೈವಾರ ತಾತಯ್ಯ ಜಯಂತಿ

 ಮೈಸೂರು ನಗರದ ಕಿರುರಂಗಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯಲ್ಲಿ ಕೈವಾರ ತಾತಯ್ಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಸಿ.ಎನ್. ಮಂಜೇಗೌಡ, ಡಾ. ಸುದರ್ಶನ್, ಗುಬ್ಬಿ ಗೂಡು ರಮೇಶ್, ವೆಂಕಟೇಶ್, ಮೀನಾ ತೂಗುದೀಪ್ ಹಾಗೂ ಇತರರು ಇದ್ದರು.
ಮೈಸೂರು ನಗರದ ಕಿರುರಂಗಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯಲ್ಲಿ ಕೈವಾರ ತಾತಯ್ಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಸಿ.ಎನ್. ಮಂಜೇಗೌಡ, ಡಾ. ಸುದರ್ಶನ್, ಗುಬ್ಬಿ ಗೂಡು ರಮೇಶ್, ವೆಂಕಟೇಶ್, ಮೀನಾ ತೂಗುದೀಪ್ ಹಾಗೂ ಇತರರು ಇದ್ದರು.
Published on
ಮೈಸೂರು: ಕೈವಾರ ತಾತಯ್ಯ ಸಮ ಸಮಾಜ ನಿರ್ಮಾಣ ಮಾಡಲು ಕೈಗೊಂಡಂತಹ ಕೆಲಸ ಕಾರ್ಯಗಳು ಸದಾ ಮಾದರಿ. ಇಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸುವುದರೊಂದಿಗೆ ಪ್ರತಿಯೊಬ್ಬರು ಅವರ ಜೀವನ ಚರಿತ್ರೆ ತಿಳಿದುಕೊಳ್ಳಬೇಕು ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ನಗರ ಪಾಲಿಕೆ, ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತ್ಯುತ್ಸವ ಸಮಿತಿ ವತಿಯಿಂದ ನಗರದ ಕಿರುರಂಗಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಜಾತಿ ಬೇದಭಾವವಿಲ್ಲದೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಅರ್ಚಕರ ವೃತ್ತಿ, ಶಾಸ್ತ್ರೀಯ ಸಂಗೀತ, ಭರತನಾಟ್ಯದಂತಹ ಕಲೆಯ ಕಡೆ ಅತಿ ಹೆಚ್ಚು ಒಲವನ್ನು ತೋರುತ್ತಿದ್ದಾರೆ, ಇದಕ್ಕೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬ ತಂದೆ ತಾಯರಿಗೂ ಅಭಿನಂದನೆಯನ್ನು ತಿಳಿಸಬೇಕೆಂದು ಹೇಳಿದರು.
ಮಹಾನ್ ವ್ಯಕ್ತಿಗಳ ಕಾರ್ಯಕ್ರಮಕ್ಕೆ ಎಲ್ಲರನ್ನು ಕರೆತರಬೇಕು ಮತ್ತು ಇವರುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮಾತನಾಡಿ, ಜೀವನದಲ್ಲಿ ಶಿಕ್ಷಣಕ್ಕಿಂತ ದೊಡ್ಡದು ಯಾವುದು ಇಲ್ಲ. ಮಕ್ಕಳಿಗೆ ಶಿಕ್ಷಣ ನೀಡಿ ಅವರಿಗೆ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿಸಿಕೊಡುವುದು ಬಹಳ ಮುಖ್ಯ. ಕೈವಾರ ತಾತಯ್ಯ ಅವರು ಸಮಾಜಕ್ಕೆ ನೀಡಿದ ಕೊಡುಗೆ, ಅವರು ನಡೆದು ಬಂದ ದಾರಿ ಎಲ್ಲರಿಗೂ ಮಾದರಿ. ಕೈವಾರ ತಾತಯ್ಯ ಅವರ ಆದರ್ಶದ ಹಾದಿಯಲ್ಲಿ ನಾವು ನಡೆಯಬೇಕು. ತಾತ್ತಯ್ಯ ಅವರ ಬದುಕು ಆದರ್ಶಗಳು ನಮ್ಮ ಜೀವನಕ್ಕೆ ಸ್ಫೂರ್ತಿಯಾಗಬೇಕು ಎಂದರು.
ಸಮಾಜದ ಮಹಾನ್ ವ್ಯಕ್ತಿ ಗಳ ಬಗ್ಗೆ ತಿಳಿದುಕೊಂಡಾಗ ನಮ್ಮಲ್ಲಿರುವ ಲೋಪದೋಷಗಳು ಕಡಿಮೆಯಾಗುತ್ತದೆ. ಕೈವಾರ ತಾತಯ್ಯ ಅವರು ಸಾಕು ತಂದೆ ತಾಯಿಂದ ವಿದ್ಯೆ ಕಲಿತು ಬೆಳೆದು ಬಂದವರು. ಅವರು 1726 ಇಸವಿಯಲ್ಲಿ ಜನಿಸಿ 1836ರಲ್ಲಿ ಸ್ವಯಂ ಪ್ರೇರಿತವಾಗಿ ಪ್ರಾಣ ತ್ಯಾಗಮಾಡಿದರು ಎಂದು ಹೇಳಿದರು.
ಉಪನ್ಯಾಸಕ ಪ್ರೊ.ಎಚ್.ಎಸ್.ನರಸಿಂಹಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಾ. ಸುದರ್ಶನ್, ಅಂಕಣಕಾರ ಗುಬ್ಬಿ ಗೂಡು ರಮೇಶ್, ಗಣ್ಯರಾದ ವೆಂಕಟೇಶ್, ಮೀನಾ ತೂಗುದೀಪ್, ಶ್ರೀನಾಥ್ ಬಾಬು, ವಿಜಯ ಸಂಪತ್ ಕುಮಾರ್, ಕೆ.ಸಿ. ಪ್ರಕಾಶ್ ಗೋಪಾಲಕೃಷ್ಣ, ಆರ್.ಎನ್.ವಿಶ್ವನಾಥ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net