ಮುಳ್ಳೂರಿನಲ್ಲಿ ಕಾಳಮ್ಮನ ಜಾತ್ರಾ ಮಹೋತ್ಸವ

ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಕಾಳಮ್ಮನ ಜಾತ್ರಾ ಕೊಂಡ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಕಾಳಮ್ಮನ ಜಾತ್ರಾ ಕೊಂಡ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
Published on
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಗ್ರಾಮ ದೇವತೆ ಕಾಳಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ವಿಜೃಂಭಣೆಯಿಂದ ಕೊಂಡೋತ್ಸವ ಗ್ರಾಮಸ್ಥರ ಸಮ್ಮುಖದಲ್ಲಿ ಜರುಗಿತು.
ಕಾಳಮ್ಮನವರ ಜಾತ್ರೆ ಅಂಗವಾಗಿ ದೇವಸ್ಥಾನಕ್ಕೆ ಸುಣ್ಣಬಣ್ಣ ಬಳಿದು ಸಿಂಗಾರ ಮಾಡಲಾಗಿತ್ತು. ಕ್ಷೇತ್ರದ ಈಶಾನ್ಯ ದಿಕ್ಕಿನಲ್ಲಿರುವ ನುಗು ಜಲಾಶಯದ ಹಿನ್ನೀರಿನಿಂದ ಗಂಗಾ ಪೂಜೆ ಮಾಡಿ ತೇರು ತರಲಾಯಿತು. ಬೆಳಗ್ಗೆ 9 ಗಂಟೆಗೆ ಭಕ್ತರು ಬಾಯಿಬೀಗ, ಮುಡಿ ತೆಗೆಸುವ ಹರಕೆ ತೀರಿಸಿದರು. ಸತ್ತಿಗೆಗಳು, ನಂದಿಧ್ವಜ, ನಾದಸ್ವರ, ಬ್ಯಾಂಡ್ ಸೆಟ್, ವೀರಗಾಸೆ ನೃತ್ಯ, ಗಾರುಡಿಗೊಂಬೆ, ಕೋಲಾಟ,ನೃತ್ಯವಾದ್ಯ, ಚಂಡೆಮೇಳ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಉಯ್ಯಲೆ ಸೇವೆ ಮೂಲಕ ಉತ್ಸವ ಮೂರ್ತಿಯನ್ನು ಗರ್ಭಗುಡಿಗೆ ತಂದು ಪ್ರತಿಷ್ಠಾಪಿಸಿ ಪೂಜೆ, ಹೋಮ, ಸಹಸ್ರನಾಮ, ಪೂರ್ಣಾಹುತಿ, ಮಹಾಮಂಗಳಾರತಿ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net