ಅಧ್ಯಕ್ಷರಾಗಿ ಕೆ.ಎನ್.ಬಸಂತ್ ಅವಿರೋಧ ಆಯ್ಕೆ

ಕೆ.ಆರ್.ನಗರದ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ 2026-31ನೇ ಸಾಲಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆ.ಎನ್.ಬಸಂತ್ ಹಾಗೂ ಎಸ್.ಮಹದೇವಯ್ಯ ಅವರನ್ನು ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸಿ.ಸುರೇಶ್ ಅಭಿನಂದಿಸಿದರು.
ಕೆ.ಆರ್.ನಗರದ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ 2026-31ನೇ ಸಾಲಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆ.ಎನ್.ಬಸಂತ್ ಹಾಗೂ ಎಸ್.ಮಹದೇವಯ್ಯ ಅವರನ್ನು ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸಿ.ಸುರೇಶ್ ಅಭಿನಂದಿಸಿದರು.
Published on
ಕೆ.ಆರ್.ನಗರ: ಕೆ.ಆರ್.ನಗರದ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ 2026-31ನೇ ಸಾಲಿಗೆ ಗುರುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಕೆ.ಎನ್.ಬಸಂತ್ ಹಾಗೂ ಉಪಾಧ್ಯಕ್ಷರಾಗಿ ಎಸ್.ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.
ಆಡಳಿತ ಮಂಡಳಿಯ ನಿರ್ದೇಶಕರ 13 ಸ್ಥಾನಗಳಿಗೆ ಜ.31ರಂದು ನಡೆದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ 13 ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿದ್ದರು. ಗುರುವಾರ ಪಟ್ಟಣದ ಬ್ಯಾಂಕ್‌ನ ಆಡಳಿತ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ನಿಗದಿಪಡಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್.ಬಸಂತ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಮಹದೇವಯ್ಯ ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯೂ ಆದ ಮೈಸೂರಿನ ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿಯ ಎಂ.ಎನ್.ಸೋಮಶೇಖರ್ ಪ್ರಕಟಿಸಿದರು.
ನಿರ್ದೇಶಕರಾದ ಎಚ್.ಎಸ್.ಲೋಕೇಶ್, ಕೆ.ಎನ್.ರಮೇಶರಾವ್ ಕದಂ, ಅಶೋಕ ಕುಮಾರ್, ಸಿ.ಪಿ.ಎಸ್.ಲೋಕೇಶ್, ಎಚ್.ಟಿ.ಗೋಪಾಲೇಗೌಡ, ಜೆ.ವೆಂಕಟೇಶ್, ಡಾ.ಎಂ.ಪಿ.ಸುಮತಿ, ವೀಣಾ ಕುಮಾರ್, ಮರಿಲಿಂಗಾಚಾರ್, ಚೇತನ, ಎಲ್.ರಂಗನಾಥ್, ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸಿ.ಸುರೇಶ್, ವ್ಯವಸ್ಥಾಪಕ ಎಂ.ಪಿ.ಸುಹಾಸ್ ಗೌಡ ಇದ್ದರು.
ಬ್ಯಾಂಕ್‌ನ ನೂತನ ಅಧ್ಯಕ್ಷ ಕೆ.ಎನ್.ಬಸಂತ್ ಮಾತನಾಡಿ, ಬ್ಯಾಂಕ್‌ಅನ್ನು ಪ್ರಗತಿ ಪಥದತ್ತ ಕೊಂಡೊಯ್ಯುವ ಮೂಲಕ ಪ್ರಸ್ತುತ ಇರುವ 820 ಕೋಟಿ ರೂ.ವ್ಯವಹಾರವನ್ನು 1 ಸಾವಿರ ಕೋಟಿ ರೂ.ಗೆ ಬೆಳೆಸಲು ಶ್ರಮಿಸುತ್ತೇನೆ. ಸಂಪೂರ್ಣ ಸಾಲ ವಸೂಲಾತಿ ಮಾಡುವ ಮೂಲಕ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಬ್ಯಾಂಕನ್ನು ಬೇರೆ ಬೇರೆ ತಾಲೂಕುಗಳಿಗೂ ವಿಸ್ತರಿಸುವ ಗುರಿ ಹೊಂದಲಾಗಿದೆ. ಎಟಿಎಂಗಳನ್ನು ಹೆಚ್ಚಿಸುವುದು, ಸ್ವಂತ ಆ್ಯಪ್ ಅಭಿವೃದ್ಧಿ, ಸಣ್ಣ ಪುಟ್ಟ ವ್ಯಾಪಾರಿಗಳು, ಸಣ್ಣ ಉದ್ಯಮಿಗಳಿಗೆ ಸಾಲಸೌಲಭ್ಯಗಳನ್ನು ನೀಡಿ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಬ್ಯಾಂಕ್‌ನ ಧ್ಯೇಯೋದ್ದೇಶಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ನೂತನ ಆಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ಹಾಗೂ ಅಭಿಮಾನಿಗಳು ಅಭಿನಂದಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಕಸಾಪ ತಾಲೂಕು ಅಧ್ಯಕ್ಷ ಡಿಂಡಿಮಶಂಕರ್, ಪುರಸಭಾ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ, ಮಾಜಿ ಸದಸ್ಯರಾದ ಕೆ.ಪಿ.ಪ್ರಭುಶಂಕರ್, ಕೆ.ಎಲ್.ಜಗದೀಶ್, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಆಲ್ಪ ಕಾಲೇಜು ಕಾರ್ಯದರ್ಶಿ ವೈ.ಎಸ್.ಸುಬ್ರಮಣ್ಯ, ಮುಖಂಡರಾದ ದಿಡ್ಡಹಳ್ಳಿ ಬಸವರಾಜ್, ಮೇಲೂರು ನಾರಾಯಣ್, ಜಯಂತ್, ಕೇಶವ್, ಮಹದೇವ್, ಕೇಬಲ್ ಮಂಜು, ಬಂಕ್ ಚಂದ್ರಶೇಖರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net