ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿರುವ ಗಿರಿಜನರು ತಮ್ಮ ಆರಾಧ್ಯ ದೇವರಾದ ಶ್ರೀ ಭದ್ರಕಾಳಿ, ಶ್ರೀ ಅಯ್ಯಪ್ಪ ಸ್ವಾಮಿಯ ಹೆಸರಿನಲ್ಲಿ ನಡೆಯುವ ಈ ಹಬ್ಬಕ್ಕೆ ಹನಗೋಡು ಹೋಬಳಿ ವ್ಯಾಪ್ತಿಯಲ್ಲಿರುವ 35ಕ್ಕೂ ಹೆಚ್ಚು ಹಾಡಿಯ ಗಿರಿಜನರು ಕಾಡಿನಲ್ಲಿ ಸಿಗುವ ಸೊಪ್ಪು, ಹಳೇ ಹರಿದ ಬಟ್ಟೆ ಹಾಗೂ ಗೋಣಿ ಚೀಲಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೆಕಾಯಿ ಬುರುಡೆ, ಪ್ಲಾಸ್ಟಿಕ್ ಡಬ್ಬಿ ಹಾಗೂ ಟಿನ್‌ಗಳನ್ನು ಡೋಲಿನ ರೀತಿಯಲ್ಲಿ ಬಡಿಯುತ್ತಾ ಆಕರ್ಷಕವಾಗಿ ಕುಣಿಯುತ್ತಾ, ಸಿಕ್ಕ-ಸಿಕ್ಕವರನ್ನು ನಿಂದಿಸುತ್ತಾ ಭಿಕ್ಷಾಟನೆ ಮಾಡುತ್ತಾ ಹಣ, ದವಸ-ಧಾನ್ಯಗಳನ್ನು ಸಂಗ್ರಹಿಸಿದರು.