ಹಲವೆಡೆ ಕುಸುಮ್-ಸಿ ಸೋಲಾರ್ ಘಟಕ ಸ್ಥಾಪನೆ

ಬೆಟ್ಟದಪುರ ಸಮೀಪದ ಚಿಕ್ಕನೇರಳೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು. ನಿತಿನ್ ವೆಂಕಟೇಶ್, ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಲೋಕೇಶ್, ಮೈಮುಲ್ ನಿರ್ದೇಶಕ ಪ್ರಕಾಶ್ ಇದ್ದರು.
ಬೆಟ್ಟದಪುರ ಸಮೀಪದ ಚಿಕ್ಕನೇರಳೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು. ನಿತಿನ್ ವೆಂಕಟೇಶ್, ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಲೋಕೇಶ್, ಮೈಮುಲ್ ನಿರ್ದೇಶಕ ಪ್ರಕಾಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಲವೆಡೆ ಕುಸುಮ್-ಸಿ ಸೋಲಾರ್ ಘಟಕ ಸ್ಥಾಪನೆ
  • ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಬೆಟ್ಟದಪುರ: ರೈತರ ಅನುಕೂಲಕ್ಕಾಗಿ ತಾಲೂಕಿನ ವಿವಿಧೆಡೆ ಕುಸುಮ್-ಸಿ ಸೋಲಾರ್ ವಿದ್ಯುತ್ ಯೋಜನೆಯಡಿ ಸೋಲಾರ್ ಘಟಕ ಸ್ಥಾಪಿಸಿ ಚಾಲನೆ ನೀಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಿಕ್ಕನೇರಳೆ ಗ್ರಾಮದಲ್ಲಿ ಶುಕ್ರವಾರ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.
ಪಿರಿಯಾಪಟ್ಟಣ ತಾಲೂಕಿಗೆ ಶಾಶ್ವತ ಯೋಜನೆಗಳನ್ನು ನೀಡುವ ಮೂಲಕ ರೈತಾಪಿ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ತಾಲೂಕಿನ ಬಹುತೇಕ ರೈತರು ವಿದ್ಯುತ್ ಸಮಸ್ಯೆಯಿಂದ ವ್ಯವಸಾಯ ಮಾಡಲಾಗದೆ, ಅವರ ಕುಟುಂಬವೇ ಆರ್ಥಿಕ ಸಂಕಷ್ಟಕ್ಕೆ ಎದುರಿಸುತ್ತಿದ್ದರು. ಬೇಸಾಯಕ್ಕೆ ಅವರು ಮಾಡಿದ ಸಾಲವನ್ನು ತೀರಿಸಲಾಗದೆ ಕಂಗಾಲು ಆಗುತ್ತಿದ್ದರು. ಹಾಗಾಗಿ ರೈತರ ಅನುಕೂಲಕ್ಕಾಗಿ ಕುಸುಮ್ ಯೋಜನೆಯಡಿ ಸೋಲಾರ್ ಘಟಕ ಸ್ಥಾಪಿಸಲಾಗುತ್ತಿದೆ. ತಾಲೂಕಿನ ಗೊರಹಳ್ಳಿ (ಕುಳ್ಳಯ್ಯನಕೊಪ್ಪಲು) ಬಳಿ 23 ಎಕರೆ, ಮರಡಿಯೂರಿನಲ್ಲಿ 14, ಚಿಕ್ಕಮಾಗಳಿ ಹತ್ತಿರ 41 ಎಕರೆ ಸೇರಿ ಒಟ್ಟು 78 ಎಕರೆ ವಿಸ್ತೀರ್ಣ ಜಾಗದಲ್ಲಿ ಸೋಲಾರ್ ಘಟಕ ಸ್ಥಾಪಿಸಿ 27 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ತಾಲೂಕಿಗೆ ಇದು ಮತ್ತೊಂದು ಶಾಶ್ವತ ಯೋಜನೆಯಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರ ಅನುಕೂಲಕ್ಕೆ ಯಾವುದೇ ಸಮಸ್ಯೆಯಾಗದಂತೆ ಕಾಪಾಡಲು ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.
ಇದೆ ಸಂದರ್ಭದಲ್ಲಿ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಳ್ಳಯ್ಯನಕೊಪ್ಪಲು (ಗೊರಳ್ಳಿ) ಗ್ರಾಮದ ಹೊರ ವಲಯದಲ್ಲಿ ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಮತ್ತು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಎಸ್ಸಿ-ಎಸ್ಟಿ ಘಟಕ ಅಧ್ಯಕ್ಷ ಶೇಖರ್, ಚಿಕ್ಕನೇರಳೆ ಡೇರಿ ಅಧ್ಯಕ್ಷ ಸಿ.ವಿ ವೆಂಕಟೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸಿ.ಜೆ. ರವಿ, ಟಿಎಪಿಸಿಎಂಎಸ್ ನಿರ್ದೇಶಕ ಸಿ.ಎನ್. ರಾಜೇಶ್, ಮುಖಂಡರಾದ ಅನಿಲ್ ಕುಮಾರ್, ಜ್ಯೋತಿ ಕುಮಾರ್, ಸಿ.ಜಿ.ರವಿ, ಗೊರಳ್ಳಿ ರಕ್ಷಿತ್, ಮೂರ್ತಿ, ಪುನೀತ್, ಶೇಖರ್, ಕಾಳೇಗೌಡ, ಶಿವಣ್ಣ, ಸೆಸ್ಕ್ ಸೂಪರಿಂಟೆಂಡೆಂಟ್ ಇಂಜಿನಿಯರ್ ಸುನೀಲ್ ಕುಮಾರ್, ಕೆ.ಆರ್ ನಗರ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರದೀಪ್ ಕುಮಾರ್, ಬೆಟ್ಟದಪುರ ಎಇಇ ಪ್ರಶಾಂತ್, ಪಿರಿಯಾಪಟ್ಟಣ ಎಇಇ ಗುರುಬಸವರಾಜಸ್ವಾಮಿ, ತಹಸೀಲ್ದಾರ್ ನಿಸರ್ಗ ಪ್ರಿಯ, ತಾ.ಪಂ. ಇಒ ಸುನೀಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net