ಬಂಡೂರು ಕುರಿ ತಳಿ ಅಭಿವೃದ್ಧಿಗೆ ಜಾಗ ಗುರುತು

ಪಿರಿಯಾಪಟ್ಟಣ ತಾಲೂಕಿನ ಅಲನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆ.ವೆಂಕಟೇಶ್ ಜಾನುವಾರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ನಿತಿನ್ ವೆಂಕಟೇಶ್,ಡಾ.ಶ್ರೀನಿವಾಸ್, ಡಾ.ಶಿವರುದ್ರಪ್ಪ, ಡಾ.ರಮೇಶ್, ಡಾ.ಶಿವಣ್ಣ, ಡಾ.ನಾಗರಾಜ್ ಇತರರು ಇದ್ದರು.
ಪಿರಿಯಾಪಟ್ಟಣ ತಾಲೂಕಿನ ಅಲನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆ.ವೆಂಕಟೇಶ್ ಜಾನುವಾರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ನಿತಿನ್ ವೆಂಕಟೇಶ್,ಡಾ.ಶ್ರೀನಿವಾಸ್, ಡಾ.ಶಿವರುದ್ರಪ್ಪ, ಡಾ.ರಮೇಶ್, ಡಾ.ಶಿವಣ್ಣ, ಡಾ.ನಾಗರಾಜ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಮಾಹಿತಿ
  • ಜಾನುವಾರು ಲಸಿಕಾ ಅಭಿಯಾನಕ್ಕೆ ಚಾಲನೆ
  • ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಕಾರ್ಯಕ್ರಮ
ಪಿರಿಯಾಪಟ್ಟಣ: ನಮ್ಮ ಅಧಿಕಾರವಧಿಯಲ್ಲಿ ರಾಜ್ಯದಲ್ಲಿ 150ಕ್ಕೂ ಹೆಚ್ಚು ಹೊಸ ಪಶು ಆಸ್ಪತ್ರೆಗಳನ್ನ ಮಂಜೂರು ಮಾಡಲಾಗಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ತಾಲೂಕಿನ ಅಲನಹಳ್ಳಿ ಗ್ರಾಮದಲ್ಲಿ ಸೋಮವಾರ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಾನುವಾರು ಲಸಿಕಾ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ತಾಲೂಕಿನಲ್ಲಿ ಆರು ಹೊಸ ಪಶು ಆಸ್ಪತ್ರೆಗಳನ್ನ ಮಂಜೂರು ಮಾಡಲಾಗಿದ್ದು, ಇದಕ್ಕೆ ಅಗತ್ಯವಿರುವ ನೂತನ ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ. ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಹಾಲಿನ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಇದ್ದು ದಸರಾ ಮತ್ತು ದೀಪಾವಳಿ ಸಂದರ್ಭದಲ್ಲಿ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಸಿಹಿ ಉತ್ಪನ್ನಗಳು ಮಾರಾಟವಾಗಿವೆ. ನಂದಿನಿ ಬ್ರಾಂಡ್ ನಲ್ಲಿ ಉತ್ಪನ್ನವಾಗುತ್ತಿರುವ ಸಿಹಿ ಉತ್ಪನ್ನಗಳು ಗುಣಮಟ್ಟದ್ದಾಗಿದ್ದು ಪ್ರತಿನಿತ್ಯ ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇತರ ಖಾಸಗಿ ಹಾಲಿನ ಕಂಪನಿಗಳ ಪೈಪೋಟಿ ನಡುವೆಯೂ ಕೆಎಂಎಫ್‌ನ ನಂದಿನಿ ಹಾಲು ಗುಣಮಟ್ಟದಾಗಿದ್ದು, ಬೇರೆ ಹಾಲುಗಳಿಗಿಂತಲೂ ಬೆಲೆ ಕಡಿಮೆ ಇದೆ ಎಂದರು.
ಬಂಡೂರು ಕುರಿ ತಳಿ ಅಭಿವೃದ್ಧಿಗಾಗಿ ತಾಲೂಕಿನ ಕಂಪಲಾಪುರ ಗ್ರಾಮದ ಬಳಿ ಸುಮಾರು 50 ಎಕರೆ ಪ್ರದೇಶದಲ್ಲಿ ಜಾಗ ಗುರುತಿಸಲಾಗಿದ್ದು ಅತಿ ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ ಅರಿವಿಲ್ಲದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಟೀಕೆ ಮಾಡುವುದೇ ಕೆಲಸವಾಗಿದೆ ಎಂದು ಟೀಕಿಸಿದರು.
ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಶ್ರೀನಿವಾಸ್ ಮಾತನಾಡಿ, ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 69.98 ಲಕ್ಷ ದನಗಳಿಗೆ ಮತ್ತು 23.39 ಲಕ್ಷ ಎಮ್ಮೆಗಳಿಗೆ ಒಂದು ತಿಂಗಳ ಅವಧಿಯಲ್ಲಿ 8 ನೇ ಸುತ್ತಿನ ಲಸಿಕೆ ಹಾಕುವ ಗುರಿ ಹೊಂದಿದ್ದು, 30 ದಿನಗಳ ಲಸಿಕೆ ಕಾರ್ಯಕ್ರಮವಿದೆ. ಪ್ರತಿದಿನ ಬೆಳಿಗ್ಗೆ 7 ರಿಂದ ಹಳ್ಳಿಯ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತದೆ. ಕೆ.ವೆಂಕಟೇಶ್ ಇಲಾಖೆಯ ಸಚಿವರಾಗಿ ಅಧಿಕಾರಕ್ಕೆ ಬಂದ ಮೇಲೆ ಪಶು ಪಾಲನೆ ಇಲಾಖೆಗೆ ಬೇಕಾಗುವ ಎಲ್ಲ ಸೌಲಭ್ಯ ಪೂರೈಸುವುದರ ಜತೆಗೆ ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ರೈತರಿಗೆ ಹೈನುಗಾರಿಕೆ ಅನುಕೂಲವಾಗುವ ಯಂತ್ರೋಪಕರಣಗಳನ್ನು ನೀಡಲಾಯಿತು. ಎಂಟನೇ ಸುತ್ತಿನ ಲಸಿಕಾ ಕಾರ್ಯಕ್ರಮದ ಮಾಹಿತಿ ನೀಡುವ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ.ಶಿವರುದ್ರಪ್ಪ, ಜಂಟಿ ನಿರ್ದೇಶಕರಾದ ಡಾ.ರಮೇಶ್, ಡಾ.ಶಿವಣ್ಣ, ಡಾ.ನಾಗರಾಜ್, ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ತಹಸೀಲ್ದಾರ್ ನಿಸರ್ಗ ಪ್ರಿಯ, ತಾ ಪಂ ಇಒ ಡಿ.ಬಿ.ಸುನಿಲ್ ಕುಮಾರ್, ಗ್ರಾ ಪಂ ಅಧ್ಯಕ್ಷ ಲೋಕೇಶ್, ಜಿಲ್ಲಾ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಾಜಣ್ಣ, ಮುಖಂಡರಾದ ಡಿ.ಟಿ.ಸ್ವಾಮಿ, ಧನರಾಜ್, ಅನಿಲ್ ಕುಮಾರ್, ಸುನಿಲ್, ಮಕ್ಬುಲ್, ಅಸ್ಲಾಂ ಪಾಷಾ, ಇಲಾಖೆಯ ವೈದ್ಯರಾದ ಡಾ.ಚಾಮರಾಜ, ಡಾ.ಮಧುಸೂದನ್, ಡಾ.ಪ್ರವೀಣ್, ಡಾ.ಕೃತಿಕ, ಡಾ.ಹರ್ಷಿತಾ, ಡಾ.ರವಿಕುಮಾರ್ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net