ಸ್ಪರ್ಧಾತ್ಮಕ ಮನೋಭಾವದಿಂದ ಮುನ್ನಡೆಯಿರಿ

ನಗರದ ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವದಲ್ಲಿ ನಿವೃತ್ತ ಮೇಜರ್ ಜನರಲ್ ಡಾ.ಮೋಹನ್ ಪಿ.ಮುತ್ತಗೀಕರ್ ಅವರನ್ನು ಸನ್ಮಾನಿಸಲಾಯಿತು. ಡಾ.ಬಿ.ಎಂ.ಸುಬ್ರಾಯ, ಆರ್.ದಿನೇಶ್, ನಾಗೇಶ್ ಹನಸೋಗೆ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನಿವೃತ್ತ ಮೇಜರ್ ಜನರಲ್ ಡಾ.ಮೋಹನ್ ಪಿ.ಮುತ್ತಗೀಕರ್ ಸಲಹೆ

ಯುವಸಮೂಹ ದೇಶಾಭಿಮಾನ ಬೆಳೆಸಿಕೊಂಡು ದೇಶಸೇವೆಗೆ ಮುಂದಾಗಬೇಕು ಎಂದು ಭಾರತೀಯ ಸೇನೆಯ ನಿವೃತ್ತ ಮೇಜರ್ ಜನರಲ್ ಡಾ.ಮೋಹನ್ ಪಿ.ಮುತ್ತಗೀಕರ್ ಕರೆ ನೀಡಿದರು.

ನಗರದ ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರೊೃೀತ್ಸವದಲ್ಲಿ ಮಾತನಾಡಿದರು. ಭಾರತ ಜಾಗತಿಕ ಸ್ಪರ್ಧಾ ಜಗತ್ತನ್ನು ಎದುರಿಸುತ್ತಿದೆ. ಯುವಜನರು ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಾತ್ಮಕ ಮನೋಭಾವದೊಂದಿಗೆ ಜಾಗೃತರಾಗಿ ಮುನ್ನಡೆಯಬೇಕು ಎಂದರು.
ಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಸರ್ದಾರ್ ವಲ್ಲಭಭಾಯಿ ಪಟೇಲ್, ಭಗತ್ ಸಿಂಗ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಅನೇಕ ನಾಯಕರ ಆದರ್ಶಗಳು ಇಂದಿನ ಯುವಕರಿಗೆ ಮಾರ್ಗದರ್ಶಕವಾಗಬೇಕು. ದೇಶಪ್ರೇಮ ಮತ್ತು ರಾಷ್ಟ್ರೀಯತೆಯನ್ನು ಎಂದಿಗೂ ಮರೆಯದೆ, ಸಮರ್ಪಣಾ ಭಾವದಿಂದ ದೇಶದ ಏಳಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ಡಾ.ಬಿ.ಎಂ.ಸುಬ್ರಾಯ, ಗೌರವ ಕಾರ್ಯದರ್ಶಿ ಆರ್. ದಿನೇಶ್, ಆಡಳಿತ ಮಂಡಳಿ ಸದಸ್ಯ ನಾಗೇಶ್ ಹನಸೋಗೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net