ಮೇದನಿಯಲ್ಲಿ ಪಿಯು ಕಾಲೇಜು ಆರಂಭಿಸಲಿ

ತಿ.ನರಸೀಪುರ ತಾಲೂಕಿನ ಮೇದನಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ತಲಕಾಡು ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎಂ.ಎನ್.ಕುಮಾರ್ ಕ್ರೀಡಾ ಜ್ಯೋತಿ ಸ್ವೀಕರಿಸುವ ಮೂಲಕ ಉದ್ಘಾಟಿಸಿದರು. ಕುಕ್ಕೂರು ಗಣೇಶ್, ಸತೀಶ್, ರಾಚನಾಯಕ, ಕುಮಾರ್, ಮಂಜುನಾಥ್, ಪರಶಿವಮೂರ್ತಿ, ಪ್ರಸಾದ್ ಇತರರು ಇದ್ದರು.
ತಿ.ನರಸೀಪುರ ತಾಲೂಕಿನ ಮೇದನಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ತಲಕಾಡು ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎಂ.ಎನ್.ಕುಮಾರ್ ಕ್ರೀಡಾ ಜ್ಯೋತಿ ಸ್ವೀಕರಿಸುವ ಮೂಲಕ ಉದ್ಘಾಟಿಸಿದರು. ಕುಕ್ಕೂರು ಗಣೇಶ್, ಸತೀಶ್, ರಾಚನಾಯಕ, ಕುಮಾರ್, ಮಂಜುನಾಥ್, ಪರಶಿವಮೂರ್ತಿ, ಪ್ರಸಾದ್ ಇತರರು ಇದ್ದರು.
Published on
ತಿ.ನರಸೀಪುರ: ಹಳ್ಳಿಗಾಡಿನ ಮಕ್ಕಳಿಗೆ ಸ್ಥಳೀಯವಾಗಿ ಪದವಿ ಪೂರ್ವ ಶಿಕ್ಷಣ ನೀಡಲು ತಾಲೂಕಿನ ಮೇದನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪಿಯು ಕಾಲೇಜು ಆರಂಭಿಸಬೇಕು ಎಂದು ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕುಕ್ಕೂರು ಗಣೇಶ್ ಒತ್ತಾಯಿಸಿದರು.
ತಾಲೂಕಿನ ಮೇದನಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ 2026-27ನೇ ಸಾಲಿನ 17 ವರ್ಷದೊಳಗಿನವರ ಶಾಲಾ ಮಕ್ಕಳ ತಲಕಾಡು ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಮೇದನಿ ಸರ್ಕಾರಿ ಪ್ರೌಢಶಾಲೆಯು ಕಾಲೇಜಾಗಿ ಉನ್ನತೀಕರಣಗೊಳ್ಳಲು ಅಗತ್ಯವಿರುವ ಎಲ್ಲ ಅರ್ಹತೆ ಹೊಂದಿದೆ ಎಂದರು. ಮೇದನಿ ಸರ್ಕಾರಿ ಪ್ರೌಢಶಾಲೆಯು ಕೆಪಿಎಸ್ ಸ್ಥಾನಮಾನ ಹೊಂದಿದ್ದು, ಉತ್ತಮ ಸೌಕರ್ಯ ಹಾಗೂ ಸುಸಜ್ಜಿತ ಕಟ್ಟಡ ಹೊಂದಿದೆ. ಶಾಸಕ ಡಾ.ಎಚ್.ಸಿ. ಮಹದೇವಪ್ಪ ಮತ್ತು ಸಂಸದ ಸುನೀಲ್ ಬೋಸ್ ಅವರ ಕಾಳಜಿ ಶಾಲೆಯ ಅಭಿವೃದ್ಧಿಗೆ ಪ್ರಮುಖ ಕಾರಣವಾಗಿದೆ. ಇದರಿಂದ ಶಾಲೆಯು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿಯೂ ಶಾಲೆಯ ಶಿಕ್ಷಕರು ಹೆಚ್ಚಿನ ಆಸಕ್ತಿ ಹಾಗೂ ಬದ್ಧತೆಯಿಂದ ಕಾರ್ಯ ನಿರ್ವಹಿಸಿ, ಶಾಲೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಮನವಿ ಮಾಡಿದರು.
ಸಮಾಜ ಸೇವಕ ಹಾಗೂ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೇದನಿ ಕುಮಾರ್ ಕ್ರೀಡಾಜ್ಯೋತಿ ಬೆಳಗಿಸಿ ಮಾತನಾಡಿದರು.
ಇದೇ ವೇಳೆ ನೆಟ್‌ಬಾಲ್ ಪಂದ್ಯದಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಸತೀಶ್, ಮಾಜಿ ಅಧ್ಯಕ್ಷ ರಾಚನಾಯಕ, ಕುಮಾರ್, ಮಂಜುನಾಥ್, ದ್ಯೆಹಿಕ ಶಿಕ್ಷಣ ಪರಿವೀಕ್ಷಕ ಪರಶಿವಮೂರ್ತಿ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸಾದ್, ಉಪಾಧ್ಯಕ್ಷ ಸಿದ್ದಮಲ್ಲಪ್ಪ, ಪ್ರಸನ್ನ, ನಂದಿನಿ, ಶೇಖರ್ ಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕ ಕುಮಾರಸ್ವಾಮಿ, ಮೇದನಿ ಸಿದ್ದರಾಜು ಸೇರಿದಂತೆ ವಿವಿಧ ಶಾಲೆಗಳ ಧೈಹಿಕ ಶಿಕ್ಷಕರು ಹಾಗೂ ಗ್ರಾಮದ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net