ಸಹಕಾರ ಸಂಘಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಲಿ

 ಸಂಗರಶೆಟ್ಟಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿತಿನ್ ವೆಂಕಟೇಶ್ ಮಾತನಾಡಿದರು.
ಸಂಗರಶೆಟ್ಟಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿತಿನ್ ವೆಂಕಟೇಶ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಆಶ್ರಯ ಸಮಿತಿ ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ನಿತಿನ್ ವೆಂಕಟೇಶ್
  • ಪಿರಿಯಾಪಟ್ಟಣ ತಾಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮ
ರಾವಂದೂರು: ಸಹಕಾರ ಸಂಘ ಅಭಿವೃದ್ಧಿ ಹೊಂದಬೇಕಾದರೆ ರೈತರ ಜತೆಗೆ ಜನಪ್ರತಿನಿಧಿಗಳ ಸಹಕಾರವೂ ಮುಖ್ಯ ಎಂದು ಆಶ್ರಯ ಸಮಿತಿ ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ಸಹಕಾರ ಮಾರಾಟ ಮಹಾಮಂಡಳಿಯಿಂದ ನೀಡಲಾದ 5 ಲಕ್ಷ ರೂ. ವಿತರಿಸಿ ಮಾತನಾಡಿದ ಅವರು, ರೈತರು ಸಾಲವನ್ನು ನಿಗದಿತ ಸಮಯಕ್ಕೆ ತೀರಿಸಬೇಕು ಎಂದು ತಿಳಿಸಿದರು.
ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್ ಮಾತನಾಡಿ, ತಾಲೂಕಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಸಚಿವರ ಕೊಡುಗೆ ಅಪಾರ. ತಾಲೂಕಿನ ಪ್ರತಿ ಸಂಘಕ್ಕೆ ಸ್ವಂತ ಕಟ್ಟಡದಿಂದ ಇರಬೇಕು. ಅಲ್ಲದೆ ಸರ್ಕಾರದಿಂದ ಬರುವ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಲುನಿರ್ದೇಶಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಂಗರಶೆಟ್ಟಹಳ್ಳಿ ಸಂಘದ ಅಧ್ಯಕ್ಷ ಎಸ್.ಪಿ.ಮಂಜುನಾಥ್, ಉಪಾಧ್ಯಕ್ಷ ಸ್ವಾಮಿಗೌಡ , ಮೇಲ್ವಿಚಾರಕರಾದ ಯತೀಶ್, ರಮೇಶ್, ಕಾರ್ಯದರ್ಶಿ ಮೂರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net