ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯಮಟ್ಟದ ವಿಸ್ತಾರ 2026 ಫೆಸ್ಟ್ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಚಿಂತನೆ ಬದುಕಿನ ಭಾಗವಾಗಿರಬೇಕು. ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಕಂಡುಕೊಳ್ಳಬೇಕು. ಮಾನವನ ಜೀವನದ ಅನುಭವವನ್ನು ತಂತ್ರಜ್ಞಾನ ತುಂಬಲು ಸಾಧ್ಯವಿಲ್ಲ ಎಂದು ತಿಳಿಸಿದರು.