ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪ್ರಾದೇಶಿಕ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮವನ್ನು ಪ್ರೊ.ಎನ್.ಕೆ.ಲೋಕನಾಥ್ ಉದ್ಘಾಟಿಸಿದರು. ಡಾ.ಡಿ.ಎಸ್.ಪ್ರತಿಮಾ, ಪ್ರೊ.ಎ.ನಾರಾಯಣ ಪ್ರಸಾದ್, ಎಸ್.ಮಾಲಿನಿ, ನಾಗರತ್ನಮ್ಮ, ಎ.ಬಿ.ನಾಗೇಂದ್ರ ಪ್ರಸಾದ್, ಡಾ.ಸಿ.ನಟರಾಜ್ ಇದ್ದರು.
Published on:
Copied
Follow Us
ಮೈಸೂರು: ಶಿಕ್ಷಣದ ಉದ್ದೇಶ ಕೇವಲ ನೌಕರಿ ಪಡೆಯುವುದಲ್ಲ. ಜ್ಞಾನಾರ್ಜನೆ ಮತ್ತು ಕೌಶಲ ವೃದ್ಧಿ ಶಿಕ್ಷಣದ ಮೂಲ ಉದ್ದೇಶವಾಗಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು.
ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬುಧವಾರ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಕಾಲೇಜು ಶಿಕ್ಷಣ ಇಲಾಖೆ ಮತ್ತು ಮೈಸೂರು ವಲಯದ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಸಹಯೋಗದಲ್ಲಿ ರೂಸ ಪ್ರಾಯೋಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಿಗೆ ಆಯೋಜಿಸಿದ್ದ ಪ್ರಾದೇಶಿಕ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ ಬೆಳೆದಂತೆ ಇಂದಿನ ಶಿಕ್ಷಣದ ಸ್ವರೂಪ ಬದಲಾಗುತ್ತಿದೆ. ವಿದ್ಯಾರ್ಥಿಗಳ ಗಮನ ಕೇವಲ 10-15 ನಿಮಿಷಗಳಿಗೆ ಸೀಮಿತವಾಗಿದೆ. ಪ್ರಾಧ್ಯಾಪಕರು ಇಂದಿನ ಶಿಕ್ಷಣ ವ್ಯವಸ್ಥೆಯ ಅಗತ್ಯತೆಗೆ ತಕ್ಕ ಹಾಗೆ ತಮ್ಮನ್ನು ನವೀಕರಿಸಿಕೊಳ್ಳಬೇಕು. ಉತ್ತಮ ಸಮಾಜವನ್ನು ನಿರ್ಮಿಸುವ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆ ಮೈಸೂರು ಪ್ರಾದೇಶಿಕ ವಲಯದ ಜಂಟಿ ನಿರ್ದೇಶಕಿ ಡಾ.ಡಿ.ಎಸ್.ಪ್ರತಿಮಾ ಮಾತನಾಡಿ, ಮೌಲ್ಯ ಆಧಾರಿತ ಮತ್ತು ಕೌಶಲ ಆಧಾರಿತ ಶಿಕ್ಷಣ ಇಂದಿನ ಅಗತ್ಯ. ಈ ನಿಟ್ಟಿನಲ್ಲಿ ಪ್ರಾಧ್ಯಾಪಕರಿಗೆ ಆಯೋಜಿಸಿರುವ ಕಾರ್ಯಕ್ರಮದ ಮೂಲಕ ಗುಣಮಟ್ಟದ ಶಿಕ್ಷಣ ಮತ್ತು ಒಳಗೊಳ್ಳುವಿಕೆ ಸಾಧಿಸಲು ಸಾಧ್ಯ ಎಂದರು.
ಕಾಲೇಜು ಶಿಕ್ಷಣ ಇಲಾ ಪ್ಲೇಸ್ಮೆಂಟ್ ಸೆಲ್‌ನ ರಾಜ್ಯ ನೋಡಲ್ ಅಧಿಕಾರಿ ಪ್ರೊ.ಎ.ನಾರಾಯಣ ಪ್ರಸಾದ್, ಮೈಸೂರು ವಿಶ್ವವಿದ್ಯಾಲಯದ ಜೆನೆಟಿಕ್ಸ್ ವಿಭಾಗದ ಮುಖ್ಯಸ್ಥೆ ಪ್ರೊ.ಸುತ್ತೂರು ಎಸ್.ಮಾಲಿನಿ, ನಾಗರತ್ನಮ್ಮ, ಎ.ಬಿ.ನಾಗೇಂದ್ರ ಪ್ರಸಾದ್, ಡಾ.ಸಿ.ನಟರಾಜ್ ಇದ್ದರು.