ಮತದಾರರೊಂದಿಗೆ ನೇರವಾಗಿ ಸಂವಾದ ನಡೆಸಿ, ಕೇಂದ್ರದಲ್ಲಿ ದೊರೆಯುತ್ತಿರುವ ಸೇವೆಗಳ ಕುರಿತು ಮಾಹಿತಿ ಪಡೆದು ಅವರ ಅಭಿಪ್ರಾಯಗಳನ್ನು ಆಲಿಸಿದರು. ಅಲ್ಲದೆ, ಬಿಎಲ್‌ಒಗಳ ಮೇಲುಸ್ತುವಾರಿಗಳು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಎಸ್‌ಐಆರ್ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಜತೆಗೆ, ಪಾರದರ್ಶಕವಾಗಿ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಗತ್ಯ ಮಾರ್ಗದರ್ಶನ ನೀಡಿದರು.