ಯುವಜನರು ದುಶ್ಚಟಗಳಿಂದ ದೂರವಿರಲಿ

ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್ ಆಶಯ
ಸರಗೂರು
ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿಯಲ್ಲಿ ಸರಳವಾಗಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.ಸರಗೂರು
Published on: 

ಸರಗೂರು: ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್ ಕುಮಾರ್ ಮಾತನಾಡಿ, ಮಹರ್ಷಿ ವಾಲ್ಮೀಕಿ ರಾಮಾಯಣದ ಮೂಲಕ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ್ದಾರೆ. ಅವರ ಜೀವನ ಮತ್ತು ಆದರ್ಶಗಳು ಇಂದಿನ ಯುವ ಪೀಳಿಗೆಗೆ ಉತ್ತಮ ಮಾರ್ಗದರ್ಶನ ನೀಡುತ್ತವೆ. ವಾಲ್ಮೀಕಿ ಅವರ ಸಂದೇಶಗಳನ್ನು ಕೇವಲ ಜಯಂತಿ ಆಚರಣೆಗೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಸಮಾಜದಲ್ಲಿ ಸಮಾನತೆ, ಸಹೋದರತ್ವ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಹರ್ಷಿ ವಾಲ್ಮೀಕಿ ಅವರ ಆಶಯಗಳನ್ನು ಸಾಕಾರಗೊಳಿಸಬೇಕಾಗಿದೆ. ಯುವಕರು ದುಶ್ಚಟಗಳಿಂದ ದೂರವಿದ್ದು, ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯಾಧಿಕಾರಿ ಅನೀತಾ ಕುಮಾರಿ, ಪಳಿನಿಸ್ವಾಮಿ, ದಿನೇಶ್, ಅರ್ಜುನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net