ಚಾಣಕ್ಯ ಶಾಲೆಯಲ್ಲಿ ಪುಟಾಣಿಗಳಿಗೆ ಅಕ್ಷರಾಭ್ಯಾಸ

 ಬೆಟ್ಟದಪುರದ ಚಾಣಕ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.
ಬೆಟ್ಟದಪುರದ ಚಾಣಕ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಚಾಣಕ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಪುಟಾಣಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲೆಯ ಮುಖ್ಯಶಿಕ್ಷಕ ಎಚ್.ಕೆ.ತಿಮ್ಮಯ್ಯ ಮಾತನಾಡಿ, ಅಕ್ಷರಾಭ್ಯಾಸವು ಮಕ್ಕಳ ಜೀವನದ ಮಹತ್ವದ ಘಟ್ಟವಾಗಿದ್ದು, ಶಿಕ್ಷಣದ ಮೊದಲ ಹೆಜ್ಜೆಯಾಗಿದೆ. ತಾಯಿ ಶ್ರೀ ಶಾರದಾಂಬೆಯ ಕೃಪೆಯಿಂದ ಎಲ್ಲ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಜೀವನದಲ್ಲಿ ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಅಧ್ಯಕ್ಷ ಯದುರಾಜ್, ಕಾರ್ಯದರ್ಶಿ ಎಂ.ಬಿ.ಜಗದೀಶ್, ಉಪಾಧ್ಯಕ್ಷ ಜಯಣ್ಣ, ಸಹಕಾರ್ಯದರ್ಶಿ ಮಹೇಶ್, ನಿರ್ದೇಶಕರಾದ ಹರೀಶ್, ಅನಿಲ್, ಧನಂಜಯ್, ಶಾಲೆಯ ಸಿಬ್ಬಂದಿ, ಪಾಲಕರು, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net