ಚಂದ್ರಗ್ರಹಣ: ಚಾಮುಂಡೇಶ್ವರಿದೇವಿ ದರ್ಶನ ಸಮಯ ಬದಲು

 ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ
ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ
Published on

ಪ್ರಮುಖ ಮುಖ್ಯಾಂಶಗಳು

  • ಗ್ರಹಣ ಸ್ಪರ್ಶ ಕಾಲ, ಮಧ್ಯಕಾಲ, ಮೋಕ್ಷ ಕಾಲದಲ್ಲಿ ವಿಶೇಷ ಪೂಜೆ
  • ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ನೈವೇದ್ಯ ಅರ್ಪಣೆ
ಮೈಸೂರು: ಚಂದ್ರಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿಯ ದರ್ಶನದ ಸಮಯ ಬದಲಾವಣೆ ಮಾಡಲಾಯಿತು.
ಮಧ್ಯಾಹ್ನ 2 ಗಂಟೆಗೆ ದೇವಾಲಯ ಬಂದ್ ಮಾಡಲಾಯಿತು. ರಾತ್ರಿ 8.30ರ ವರೆಗೆ ದೇವಾಲಯದ ಬಾಗಿಲು ಮುಚ್ಚಲಾಯಿತು. ಗ್ರಹಣ ಸ್ಪರ್ಶ ಕಾಲ, ಮಧ್ಯಕಾಲ ಹಾಗೂ ಮೋಕ್ಷ ಕಾಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. 
ವಿಶೇಷ ಪೂಜೆ ವೇಳೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಬುಧವಾರ (ಮಾ.4) ಬೆಳಗ್ಗೆ 7.30ರಿಂದ ಎಂದಿನಂತೆ ಸಾರ್ವಜನಿಕರ ದರ್ಶನಕ್ಕೆ ದೇವಾಲಯ ತೆರೆಯಲಿದೆ. 
ದಕ್ಷಿಣಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಪೂಜಾ ಕೈಂಕರ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಗ್ರಹಣ ಕಾಲದಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ನೈವೇದ್ಯ ಅರ್ಪಣೆ ಮಾಡಲಾಯಿತು.
ನಗರದ ಅಗ್ರಹಾರದಲ್ಲಿರುವ ಹೆಸರಾಂತ 101 ಗಣಪತಿ ದೇವಸ್ಥಾನದ ಪೂಜಾ ಕೈಂಕರ್ಯದಲ್ಲಿ ಬದಲಾವಣೆ ಮಾಡಲಾಯಿತು. ಮಧ್ಯಾಹ್ನ 12 ಗಂಟೆಗೆ ಗಣಪತಿ ದೇವಸ್ಥಾನ ಬಂದ್ ಮಾಡಲಾಯಿತು. ಸಂಜೆ 7ಗಂಟೆವರೆಗೂ ಭಕ್ತರ ದರ್ಶನಕ್ಕೆ ಯಾವುದೇ ಅವಕಾಶ ಇರಲಿಲ್ಲ.
ಗ್ರಹಣದ ಸ್ಪರ್ಶ ಕಾಲ, ಮಧ್ಯಕಾಲ ಹಾಗೂ ಮೋಕ್ಷ ಕಾಲದಲ್ಲಿ 101 ಗಣಪತಿಗೆ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು. ಗ್ರಹಣ ನಂತರ ದೇವಾಲಯ ಶುದ್ಧಿಗೊಳಿಸಿ ನಂತರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net