ಡಾ.ರಾಜ್‌ಕುಮಾರ್ ಅವರ ಅಳಿಯ ಗೋವಿಂದರಾಜು, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ರಘುಲಾಲ್ ಕಂಪನಿಯ ಮುಖ್ಯಸ್ಥ ರಾಘವನ್, ಚಾಮುಂಡಿ ಬೆಟ್ಟದ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್, ಚಾರ್ಟರ್ಡ್ ಅಕೌಂಟೆಂಟ್ ಲಕ್ಷ್ಮೀಶ್ ಸೇರಿದಂತೆ ಸಾಕಷ್ಟು ಗಣ್ಯರು, ಹಿರಿಯರು ದೇವಾಲಯಕ್ಕೆ ಆಗಮಿಸಿ, ಮಹಾ ಸುದರ್ಶನ ಹೋಮದಲ್ಲಿ ಪಾಲ್ಗೊಂಡು ಪ್ರಸಾದ ಪಡೆದರು.