ಮೊಬೈಲ್‌ನಲ್ಲೇ ಸಿನಿಮಾ ನಿರ್ಮಾಣ ಮಾಡಿ : ಪ್ರೊ.ರಾಜಪ್ಪ ದಳವಾಯಿ

ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಚಾರೋಪನ್ಯಾಸ ಕಾರ್ಯಕ್ರಮವನ್ನು ವಿದ್ವಾಂಸ ಪ್ರೊ.ರಾಜಪ್ಪ ದಳವಾಯಿ ಉದ್ಘಾಟಿಸಿದರು. ಪ್ರೊ.ಎಂ. ನಂಜಯ್ಯ ಹೊಂಗನೂರು, ಡಾ.ಪಿ. ಬೆಟ್ಟೇಗೌಡ, ಡಾ.ಆರ್. ಗುರುಸ್ವಾಮಿ, ರುಕ್ಮಿಣಿ ಇದ್ದರು.
ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಚಾರೋಪನ್ಯಾಸ ಕಾರ್ಯಕ್ರಮವನ್ನು ವಿದ್ವಾಂಸ ಪ್ರೊ.ರಾಜಪ್ಪ ದಳವಾಯಿ ಉದ್ಘಾಟಿಸಿದರು. ಪ್ರೊ.ಎಂ. ನಂಜಯ್ಯ ಹೊಂಗನೂರು, ಡಾ.ಪಿ. ಬೆಟ್ಟೇಗೌಡ, ಡಾ.ಆರ್. ಗುರುಸ್ವಾಮಿ, ರುಕ್ಮಿಣಿ ಇದ್ದರು.
Published on
ಮೈಸೂರು: ವಿದ್ಯಾರ್ಥಿಗಳಲ್ಲಿ ಕೌಶಲ ಇದ್ದರೆ ಮೊಬೈಲ್ ಬಳಸಿಕೊಂಡೇ ಎಐ ಮೂಲಕ ಸಿನಿಮಾ ನಿರ್ಮಾಣ ಮಾಡಬಹುದು ಎಂದು ವಿದ್ವಾಂಸ ಪ್ರೊ.ರಾಜಪ್ಪ ದಳವಾಯಿ ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗ ಮತ್ತು ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಚಾರೋಪನ್ಯಾಸ ಕಾರ್ಯಕ್ರಮದಲ್ಲಿ ‘ಸಾಹಿತ್ಯ ಮತ್ತು ಸಿನಿಮಾ’ ವಿಷಯದ ಕುರಿತು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‌ಅನ್ನು ಉತ್ತಮ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲು ಕಲಿಯಬೇಕು ಎಂದರು.
ತಂತ್ರಜ್ಞಾನದ ಆವಿಷ್ಕಾರದಿಂದ ಸಿನಿಮಾ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಈ ಹಿಂದೆ ಚಿತ್ರಗಳನ್ನೇ ಬಳಕೆ ಮಾಡಿಕೊಂಡು ಸಿನಿಮಾ ನಿರ್ಮಾಣ ಮಾಡಲಾಗುತಿತ್ತು. ಆ ನಂತರ ಮೂಕಿ ಚಿತ್ರಗಳ ಕಾಲ ಪ್ರಾರಂಭವಾಯಿತು. ಇದೀಗ ಎಐ ಬಳಕೆ ಮಾಡಿಕೊಂಡು ಸಿನಿಮಾ ನಿರ್ಮಾಣ ಮಾಡುವ ಹಂತಕ್ಕೆ ತಂತ್ರಜ್ಞಾನ ಬೆಳೆದಿದೆ ಎಂದರು.
ಪ್ರಸ್ತುತ ಪ್ರತಿಯೊಬ್ಬರು ಮೊಬೈಲ್ ರೀಲ್ಸ್‌ಗಳ ಹಿಂದೆ ಬಿದ್ದಿದ್ದಾರೆ. ಹಾಗಾಗಿ ಯಾರಿಗೂ ಸಿನಿಮಾವನ್ನು ಪೂರ್ತಿಯಾಗಿ ನೋಡುವ ವ್ಯವಧಾನ ಇಲ್ಲ. ಸಿನಿಮಾದ ಒಂದೆರಡು ದೃಶ್ಯ ನೋಡಿ ಸಿನಿಮಾ ಚೆನ್ನಾಗಿಲ್ಲ ಎಂಬ ನಿರ್ಧಾರಕ್ಕೆ ಬರುತ್ತಾರೆ. ಕೆಲವರು ಸಿನಿಮಾದ ಪೋಸ್ಟರ್ ನೋಡಿಯೇ ಚೆನ್ನಾಗಿಲ್ಲ ಎಂಬ ಅಭಿಪ್ರಾಯಕ್ಕೆ ಬರುತ್ತಾರೆ. ನಮ್ಮಲ್ಲಿ ಸಿನಿಮಾ ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕ ಪ್ರೊ.ಎಂ. ನಂಜಯ್ಯ ಹೊಂಗನೂರು, ಕುವೆಂಪುನಗರ ಕಾಲೇಜಿನ ಪ್ರಾಂಶುಪಾಲ ಡಾ.ಪಿ. ಬೆಟ್ಟೇಗೌಡ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಆರ್. ಗುರುಸ್ವಾಮಿ, ಪ್ರಾಧ್ಯಾಪಕಿ ರುಕ್ಮಿಣಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net