ಜಿಲ್ಲೆಯ ರಸ್ತೆ ಬದಿಗಳಲ್ಲಿ ಮಕ್ಕಳು ಭಿಕ್ಷಾಟನೆ ಮಾಡುವುದನ್ನು ತಡೆಯಲು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಿ ಶಿಕ್ಷಣ ನೀಡಲು ಅಧಿಕಾರಿಗಳು ಸಂಘಟಿತರಾಗಿ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳು ಅನಿರೀಕ್ಷಿತ ದಾಳಿಗಳನ್ನು ನಡೆಸಿ ಭಿಕ್ಷಾಟನೆ ಮಾಡುವ ಮಕ್ಕಳನ್ನು ರಕ್ಷಿಸಬೇಕು ಎಂದು ನಿರ್ದೇಶನ ನೀಡಿದರು.