ಮಲಬಾರ್ ಗೋಲ್ಡ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ಪಿ. ಶರಫುದ್ದೀಪ್, ಡಾ.ಡಿ.ಎಸ್. ಪ್ರತಿಮಾ, ಪಿ. ಶಿವಣ್ಣ, ಡಾ.ಎಸ್. ಮುತ್ತುರಾಜ, ಸಿ.ಕೆ. ಭವ್ಯ, ದಯಾನಂದ್, ಮಹಮದ್ ಅನ್ಸದ್, ಪ್ರೊ.ಎಸ್. ವೆಂಕಟೇಶ ಇದ್ದರು.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ಪಿ. ಶರಫುದ್ದೀಪ್, ಡಾ.ಡಿ.ಎಸ್. ಪ್ರತಿಮಾ, ಪಿ. ಶಿವಣ್ಣ, ಡಾ.ಎಸ್. ಮುತ್ತುರಾಜ, ಸಿ.ಕೆ. ಭವ್ಯ, ದಯಾನಂದ್, ಮಹಮದ್ ಅನ್ಸದ್, ಪ್ರೊ.ಎಸ್. ವೆಂಕಟೇಶ ಇದ್ದರು.
Published on
ಮೈಸೂರು: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯ 52 ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ 422 ವಿದ್ಯಾರ್ಥಿನಿಯರಿಗೆ ಗುರುವಾರ ನಗರದ ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ 35.66 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಡಿಸಿಇ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ.ಡಿ.ಎಸ್. ಪ್ರತಿಮಾ ಮಾತನಾಡಿ, ದೇಶದ ಅಭಿವೃದ್ಧಿಗೆ ಆಹಾರ, ಆರೋಗ್ಯ ಮತ್ತು ಶಿಕ್ಷಣ ಅಗತ್ಯ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಒತ್ತು ನೀಡುತ್ತಿರುವುದು ಶ್ಲಾಘನೀಯ. ಎಲ್ಲರಿಗೂ ಶಿಕ್ಷಣ ನೀಡಲು ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ಗಂಡು ಮಕ್ಕಳಿಗೂ ಉಚಿತ ಬಸ್‌ಪಾಸ್ ನೀಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸರ್ಕಾರದ ಜತೆಗೆ ಸಂಘ ಸಂಸ್ಥೆಗಳು ಶಿಕ್ಷಣ ಕ್ಷೇತ್ರದ ಪ್ರಗತಿಗೆ ಕೈಜೋಡಿಸುತ್ತಿರುವುದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕಿ ಸಿ.ಕೆ. ಭವ್ಯ ಮಾತನಾಡಿ, ಶಿಕ್ಷಣ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮುಖ್ಯ. ಉದ್ಯೋಗ ಹಾಗೂ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಲು ಶಿಕ್ಷಣದ ಅವಶ್ಯಕತೆ ಇದೆ. ಪ್ರಸ್ತುತ ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕೌಶಲ ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯೋಗ ಸೃಷ್ಟಿಸುವವರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಪಿ. ಶಿವಣ್ಣ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ.ಎಸ್. ಮುತ್ತುರಾಜ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕಿ ಸಿ.ಕೆ. ಭವ್ಯ, ಮಲಬಾರ್ ಗೋಲ್ಡ್ ಆ್ಯಂಡ್‌ನ ಡೆಪ್ಯೂಟಿ ಸ್ಟೋರ್‌ಹೆಡ್ ದಯಾನಂದ್, ಮಹಮದ್ ಅನ್ಸದ್, ವಿದ್ಯಾರ್ಥಿವೇತನ ಸಮಿತಿ ಸಂಯೋಜಕ ಪ್ರೊ.ಎಸ್. ವೆಂಕಟೇಶ ಇದ್ದರು.
ಹಲವು ಸಾಮಾಜಿಕ ಕಾರ್ಯ
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ತನ್ನ ವಹಿವಾಟಿನ ಜತೆಗೆ ಸಾಮಾಜಿಕ ಸೇವಾ ಕಾರ್ಯದಲ್ಲೂ ತೊಡಗಿಸಿಕೊಂಡಿದೆ. ಸಂಸ್ಥೆಯ ಲಾಭದಲ್ಲಿ ಶೇ.5 ರಷ್ಟು ಮೊತ್ತವನ್ನು ಸೇವಾ ಚಟುವಟಿಕೆಗೆ ಮೀಸಲಾಗಿ ಇಡುತ್ತಿದ್ದೇವೆ ಎಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ದಕ್ಷಿಣ ವಲಯ ಮುಖ್ಯಸ್ಥ ಪಿ. ಶರಫುದ್ದೀಪ್ ಹೇಳಿದರು.
ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದೇವೆ. ದೇಶದಲ್ಲಿ ಇದುವರೆಗೆ 1.40 ಲಕ್ಷ ವಿದ್ಯಾರ್ಥಿಗಳಿಗೆ, ರಾಜ್ಯದಲ್ಲಿ 31,500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಇಷ್ಟು ಮಾತ್ರವಲ್ಲದೆ ಹಸಿವು ಮುಕ್ತ ಪ್ರಪಂಚ ಯೋಜನೆಯಡಿ ಪ್ರತಿನಿತ್ಯ 1.50 ಲಕ್ಷ ಜನರಿಗೆ ಆಹಾರ ವಿತರಣೆ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಪ್ರತಿನಿತ್ಯ 375 ಜನರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ. ‘ಅಜ್ಜಿಮನೆ’ ಯೋಜನೆಯಡಿ ಬೀದಿಗಳಲ್ಲಿ ವಾಸವಾಗಿರುವ ಮಹಿಳೆಯರಿಗೆ ಉಚಿತ ವಸತಿ, ಊಟ ನೀಡಲಾಗುತ್ತಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net