ರೈಲಿನಲ್ಲಿ ಪ್ರಯಾಣಿಕರೊಬ್ಬರ 1.15ಲಕ್ಷ ರೂ. ಮೌಲ್ಯದ ಲ್ಯಾಪ್‌ಟಾಪ್ ಕಳವು ಮಾಡಿದ್ದವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಜಿ.ಸಂಗಮೆಶ್ ಬಂಧಿತ. ಈತ ಮಾ.4ರಂದು ಚಂಡೀಗಢ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾವೇರಿ ನಿವಾಸಿ ಚಂದ್ರೇಗೌಡ ಪಾಟೀಲ್ ಎಂಬುವರ ಲ್ಯಾಪ್‌ಟಾಪ್ ಕಳವು ಮಾಡಿದ್ದ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಯು ಬ್ಯಾಗ್ ಒಯ್ಯುತ್ತಿರುವುದು ಗಮನಕ್ಕೆ ಬಂದಿದೆ. ನಂತರ ಖಚಿತ ಮಾಹಿತಿ ಮೇರೆಗೆ ಆತನನ್ನು ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.