ಬೈಲುಕುಪ್ಪೆ: ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲುಕುಪ್ಪೆ, ಕೊಪ್ಪ, ದೊಡ್ಡ ಹೊಸೂರು, ರಾಣಿ ಗೇಟ್, ತಿರುಮಲಪುರ, ಅವರ್ತಿ, ಆನಂದನಗರ ಹಾಗೂ ಗ್ರಾಮೀಣ ಭಾಗದಲ್ಲಿ ಶನಿವಾರ ಮುಸ್ಲಿಮರು ಈದ್ ಉಲ್ ಫಿತ್ರ್ ಸಂಭ್ರಮದಿಂದ ಆಚರಿಸಿದರು.
ಒಂದು ತಿಂಗಳಿಂದ ಉಪವಾಸ ವ್ರತ ಆಚರಿಸಿದ ಮುಸ್ಲಿಮರು ಹೊಸ ಉಡುಪುಗಳನ್ನು ಧರಿಸಿ ಸಂಭ್ರಮಿಸಿದರು. ಅಲ್ಲದೆ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬೈಲುಕುಪ್ಪೆ ಪಿಎಸ್‌ಐ ರವಿಕುಮಾರ್ ನೇತೃತ್ವದಲ್ಲಿ ಮುಸ್ಲಿಮರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೂಲಕ ಈದ್ಗಾ ಮೈದಾನಕ್ಕೆ ತೆರಳಿದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.