ತನ್ವೀರ್ ಸೇಠ್ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ

 ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಗಲಿಗರು, ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಶೀರ್, ಪ್ರದೀಪ್ ಕುಮಾರ್, ಸತ್ಯರಾಜ್, ಮುಖಂಡರಾದ ಸೈಯದ್ ಇಕ್ಬಾಲ್, ಅಕ್ಮಲ್ ಪಾಷಾ, ಸೌಕತ್, ಶಹೀನ್ ಶಾ, ಅಫ್ತಬ್ ಇನ್ನಿತರರಿದ್ದರು
ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಗಲಿಗರು, ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಶೀರ್, ಪ್ರದೀಪ್ ಕುಮಾರ್, ಸತ್ಯರಾಜ್, ಮುಖಂಡರಾದ ಸೈಯದ್ ಇಕ್ಬಾಲ್, ಅಕ್ಮಲ್ ಪಾಷಾ, ಸೌಕತ್, ಶಹೀನ್ ಶಾ, ಅಫ್ತಬ್ ಇನ್ನಿತರರಿದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆ

ಮೈಸೂರು: 

ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಗಲಿಗರು, ಅಭಿಮಾನಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮೈಸೂರು-ಬೆಂಗಳೂರು ಹೆದ್ದಾರಿಯ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಜಮಾಯಿಸಿದ ಸುಮಾರು 2 ಸಾವಿರ ಬೆಂಬಲಿಗರು, ಮಾಜಿ ನಗರಪಾಲಿಕೆ ಸದಸ್ಯರು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಧರಣಿ ನಡೆಸಿದರು. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
ಅನುಭವಿ ಹಾಗೂ ಹಿರಿಯ ನಾಯಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ಅನ್ಯಾಯ. ಹಿಂದೆ ಮೈಸೂರು ಜಿಲ್ಲೆಯಿಂದ ಇಬ್ಬರು ಸಚಿವರು ಹಾಗೂ ಒಬ್ಬರು ಮುಖ್ಯಮಂತ್ರಿಯಾಗಿದ್ದರು. ಆದರೆ, ಈ ಸಲ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ಕೊಟ್ಟಿಲ್ಲ. 
ಸಚಿವ ಸ್ಥಾನ ಸಿಗದಿದ್ದಕ್ಕೆ ತನ್ವೀರ್ ಸೇಠ್ ಮನಸ್ಸಿಗೆ ತೀವ್ರ ಬೇಸರವಾಗಿದೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತಿಸಿದ್ದರು. ಆದರೆ, ಯಾವುದೇ ಕಾರಣಕ್ಕೂ ಅವರು ರಾಜೀನಾಮೆ ನೀಡಬಾರದು. ಜತೆಗೆ, ಪಕ್ಷದಲ್ಲೇ ಇದ್ದುಕೊಂಡು ಸಚಿವ ಸ್ಥಾನ ಸಿಗುವವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್, ನರಸಿಂಹರಾಜ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಕ್ಬಾಲ್, ನಗರಪಾಲಿಕೆ ಮಾಜಿ ಸದಸ್ಯರಾದ ಪಂಡು, ಬಶೀರ್, ಪ್ರದೀಪ್ ಕುಮಾರ್, ಸತ್ಯರಾಜ್, ಮುಖಂಡರಾದ ಸೈಯದ್ ಇಕ್ಬಾಲ್, ಅಕ್ಮಲ್ ಪಾಷಾ, ಸೌಕತ್, ಶಹೀನ್ ಶಾ, ಅಫ್ತಬ್, ಶರತ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರತಿಭಟನೆಯಿಂದಾಗಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net