ಆರೋಗ್ಯ ಸೇವೆ ಸದುಪಯೋಗವಾಗಲಿ

ಸರಗೂರು ತಾಲೂಕಿನ ಮುಳ್ಳೂರು ಗ್ರಾಮದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು. ರವಿಕುಮಾರ್, ಶಿವಕುಮಾರ್, ಶಿವಲಿಂಗ ಇತರರು ಇದ್ದರು.
ಸರಗೂರು ತಾಲೂಕಿನ ಮುಳ್ಳೂರು ಗ್ರಾಮದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು. ರವಿಕುಮಾರ್, ಶಿವಕುಮಾರ್, ಶಿವಲಿಂಗ ಇತರರು ಇದ್ದರು.
Published on
ಸರಗೂರು: ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ ಪ್ರಶಸ್ತಿ ಬಂದಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ಹಾರ್ಟ್ ಸಂಸ್ಥೆ ಮೈಸೂರು, ರೋಟರಿ ಕ್ಲಬ್ ಆಫ್ ಮೈಸೂರು ವೆಸ್ಟ್, ಎಚ್.ಡಿ.ಕೋಟೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಗುರುಪ್ರಸಾದ್ ಜಿ.ಪಿ. ಗ್ರೂಪ್ಸ್ ಬಿಲ್ಡರ್ ಆ್ಯಂಡ್ ಡೆವಲಪರ್ಸ್, ಸ್ಥಳೀಯ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಮುಳ್ಳೂರು ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮುಳ್ಳೂರು ಆಸ್ಪತ್ರೆ ಎಚ್.ಡಿ.ಕೋಟೆ ಮತ್ತು ನಂಜನಗೂಡು ತಾಲೂಕಿನ ಮಧ್ಯದಲ್ಲಿದ್ದರೂ ತಾಲೂಕು ಆಸ್ಪತ್ರೆಗಳಿಗೆ ಸಂಪರ್ಕ ಇಲ್ಲ. ಹೀಗಾಗಿ ತುರ್ತು ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗುವುದು, ಸಿಬ್ಬಂದಿ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದರು.ಉಚಿತ ಆರೋಗ್ಯ
ಶಿಬಿರ ಹಮ್ಮಿಕೊಂಡಿದ್ದು, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಇಸಿಜಿ, ಕಣ್ಣಿನ ಪರೀಕ್ಷೆ ಶ್ವಾಸಕೋಶ ಪರೀಕ್ಷೆ ನಡೆಸಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಿ. ಆರೋಗ್ಯ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಹಾರ್ಟ್ ಸಂಸ್ಥೆಯು 8 ಶಿಬಿರಗಳನ್ನು ನಮ್ಮ ತಾಲೂಕಿನಲ್ಲಿ ನಡೆಸಿದ್ದು, ಇದು 9ನೇ ಶಿಬಿರವಾಗಿದೆ. ಗ್ರಾಮಗಳಲ್ಲಿ ಶಿಬಿರಗಳು ನಡೆಯಬೇಕು. ಈ ಭಾಗದಲ್ಲಿ ತಾಲೂಕಿನ ಆಸ್ಪತ್ರೆಗಳಿಗೆ ಸಂಪರ್ಕ ಇಲ್ಲದೆ ಇರುವುದರಿಂದ ಇಲ್ಲಿಗೆ ತಜ್ಞ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಲಾಗುತ್ತಿದೆ. ಕಾಡಂಚಿನ ಗ್ರಾಮಗಳಿಗೆ ತುರ್ತು ಸಂದರ್ಭದ ಚಿಕಿತ್ಸೆಗಾಗಿ ಆಂಬುಲೆನ್ಸ್ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಲು ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ. ಆರೋಗ್ಯವೇ ಭಾಗ್ಯ. ಹಣ ಅಂತಸ್ತು ಏನೇ ಇದ್ದರೂ ಆರೋಗ್ಯ ಸರಿ ಇಲ್ಲದೆ ಹೋದರೆ ಬದುಕೇ ಶೂನ್ಯ. ಈ ನಿಟ್ಟಿನಲ್ಲಿ ಈ ಆರೋಗ್ಯ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮುಳ್ಳೂರು ಪಿಡಿಒ ಮಹೇಂದ್ರ ಸ್ವಾಮಿ, ಬಿಲ್ ಕಲೆಕ್ಟರ್ ನಾಗರಾಜು, ಕಾಂಗ್ರೆಸ್ ಮುಖಂಡ ಪುಟ್ಟಸ್ವಾಮಿ, ಮೈಸೂರು ಎ.ಎಸ್.ಜಿ ಕಣ್ಣಿನ ಆಸ್ಪತ್ರೆಯ ಮಹೇಶ್, ಜಾರ್ಜ್ ಮತ್ತು ತಂಡ, ನಾರಾಯಣ ಹೆಲ್ತ್ ಸುಪ್ರೀತ್ ಮತ್ತು ತಂಡ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ರವಿರಾಜ್, ಶರಣಪ್ಪ, ಆಸೀಮಾ, ರೇಖಾ, ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೀರಭದ್ರ ಶಿವೇಶ, ವಿನಯ ಕುಮಾರ್, ಶಿವಮ್ಮ, ನೀಲಮ್ಮ ಮಹಾಲಕ್ಷ್ಮೀ, ಸುಬ್ರಮಣ್ಯ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಕಾರ್ಯಕ್ರಮದ ಸುನಂದಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net