ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಗುರಿ ಸಾಧ್ಯವಾಗಲಿ

ಸರಗೂರು ತಾಲೂಕಿನ ಬಿ ಮಟಕರೆ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪರೀಕ್ಷೆ ಪೂರ್ವ ತರಬೇತಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜು ಉದ್ಘಾಟಿಸಿದರು. ರಾಜು, ನಾರಯಣ ಇತರರು ಇದ್ದರು.
ಸರಗೂರು ತಾಲೂಕಿನ ಬಿ ಮಟಕರೆ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪರೀಕ್ಷೆ ಪೂರ್ವ ತರಬೇತಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜು ಉದ್ಘಾಟಿಸಿದರು. ರಾಜು, ನಾರಯಣ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • SSLC
  • target
ಸರಗೂರು: ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶದ ಗುರಿ ಸಾಧಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜು ತಿಳಿಸಿದರು.
ತಾಲೂಕಿನ ಬಿ ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಸಂಸ (ಅಂಬೇಡ್ಕರ್ ವಾದ) ಸಂಘಟನೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಡಂಚಿನ ಭಾಗದಲ್ಲಿರುವ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಸಂಸ ಸಂಘಟನೆ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಮಾದರಿ ಕೆಲಸ. ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮುಖ್ಯ ಎಂದರು.
ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ತುಂಬಾ ಮುಖ್ಯ ಘಟ್ಟ. ಹೀಗಾಗಿ ಶಿಕ್ಷಕರು, ಪಾಲಕರಿಗೆ ಹೆಚ್ಚಿನ ನಿರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳು ಪಠ್ಯವನ್ನು ನಿತ್ಯ ಅಭ್ಯಾಸ ಮಾಡಿದರೆ ವಿಷಯಗಳು ಸುಲಭವಾಗಿ ಅರ್ಥವಾಗಲಿವೆ ಎಂದು ಹೇಳಿದರು.
ಬಿ ಮಟಕರೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರಾದ ಡಾ. ಚಂದ್ರ ಶೇಖರ್ ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ರೈಟಿಂಗ್ ಪ್ಯಾಡ್ ಹಾಗೂ ಪೆನ್ ವಿತರಿಸಲಾಯಿತು. ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ದೊಡ್ಡ ಸಿದ್ದು, ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಉಪ ಪ್ರಾಂಶುಪಾಲ ಮಾರುತಿ ಗೌಡ, ಮುಖ್ಯ ಶಿಕ್ಷಕ ರಾಜುಬಂಡಳ್ಳಿ, ಬಡಗಲಪುರ ಪ್ರೌಢಶಾಲೆ ವಿಜಿ, ಶಿರಮ್ಮ, ಮಹದೇವಸ್ವಾಮಿ, ಶಿವರಾಜು, ಕೃಷ್ಣ ಕುರ್ಣೆಗಾಲ, ಮಣಿಕಂಠ, ಶಿವಕುಮಾರ್ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net