ಮೇಕುದಾಟು ಯೋಜನೆ, ಮೋದಿ ಮಧ್ಯಪ್ರವೇಶ ಮಾಡಲಿ : ಎಂಎಲ್‌ಸಿ ಮಂಜೇಗೌಡ ಆಗ್ರಹ

ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ
Published on
ಮೈಸೂರು: ಮೇಕೆದಾಟು ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಆಗ್ರಹಿಸಿದರು.
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆಯಿಂದ ಎರಡು ರಾಜ್ಯಗಳಿಗೆ ಅನುಕೂಲವಾಗಲಿದೆ. ಈ ಕುರಿತು ರಾಷ್ಟ್ರಪತಿ, ಪ್ರಧಾನಿ , ಕೇಂದ್ರ ನೀರಾವರಿ ಮಂತ್ರಿಗಳನ್ನು ಕಾವೇರಿ ಕ್ರಿಯಾ ಸಮಿತಿ ನಿಯೋಗದಿಂದ ಭೇಟಿ ಮಾಡಿ ಮೇಕೆದಾಟು ಯೋಜನೆಗೆ ನಿರ್ಮಾಣಕ್ಕೆ ಅನುಮತಿ ಕೊಡಿಸುವಂತೆ ಮನವಿ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಧಾನಿ ಮೇಕೆದಾಟು ವಿಚಾರವಾಗಿ ಮಧ್ಯಸ್ಥಿಕೆ ವಹಿಸಿ ಮೇಕೆದಾಟುವಿನಲ್ಲಿ ಅಣೆಕಟ್ಟೆ ಕಟ್ಟಲು ಅವಕಾಶ ಕೊಡಿಸಬೇಕು. ಕಾವೇರಿ ಹುಟ್ಟುವುದು ರಾಜ್ಯದ ಕೊಡಗಿನಲ್ಲಿ, ಇಲ್ಲಿ ಹುಟ್ಟುವ ನೀರಿನ ರಾಜ್ಯಕ್ಕೆ ಸಲ್ಲಬೇಕು. ನೀರು ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಅಣೆಕಟ್ಟು ಕಟ್ಟಲು ಉದ್ದೇಶ ಇದೆ. ಇದರಿಂದ ತಮಿಳುನಾಡಿಗೆ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
1974ರಲ್ಲಿ ಕಾವೇರಿ ನೀರಿನ ಒಪ್ಪಂದವನ್ನು ಮರು ಪರಿಶೀಲನೆ ಮಾಡಬೇಕು. ರಾಜಕೀಯ ಪಕ್ಷಗಳು ಕಿತ್ತಾಟದಿಂದ ರಾಜ್ಯದಲ್ಲಿ ಕಾವೇರಿ ವಿವಾದ ಇಂದಿಗೂ ಮುಂದುವರೆದಿದೆ. ಆದರೆ, ತಮಿಳುನಾಡು ಜಲ, ನೆಲ, ಭಾಷೆಯ ವಿಷಯ ಬಂದಾಗ ಪಕ್ಷಭೇದ ಮರೆತು ಒಂದಾಗುತ್ತಾರೆ.ಆದರೆ, ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಮಿಳುನಾಡಿನ ಯಾವುದೇ ಸರ್ಕಾರ ಬಂದರೂ ಕಾವೇರಿ ನೀರಿನ ವಿಚಾರವಾಗಿ ಧ್ವನಿ ಎತ್ತುತಿದೆ. ಅದೇ ರೀತಿ ನೂತನ ಸಿಎಂ ಜೋಸೆಫ್ ವಿಜಯ್ ಮೇಕೆದಾಟು ವಿಚಾರವಾಗಿ ಧ್ವನಿ ಎತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಟಿ ಶುಭರಕ್ಷಾ, ಸಮಿತಿ ಪದಾಧಿಕಾರಿಗಳಾದ ಎಸ್.ಜಯಪ್ರಕಾಶ್, ಮೂಗೂರು ನಂಜುಂಡಸ್ವಾಮಿ, ಮೆಲ್ಲಹಳ್ಳಿ ಮಹದೇವಸ್ವಾಮಿ, ಎಂ.ಜೆ.ಸುರೇಶ್‌ಗೌಡ, ಶಿವಕುಮಾರ್, ರವೀಶ್, ಹನುಮಂತೇಗೌಡ, ಸ್ವಾಮಿಗೌಡ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net