ಹಕ್ಕುಗಳಿಗಾಗಿ ನಾವೆಲ್ಲರೂ ಒಗ್ಗೂಡಬೇಕಿದೆ

ಸಗರಗೂರು ಪಟ್ಟಣದ ಡಾ.ಬಾಬು ಜಗಜೀವನ ರಾಮ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಮಾದಾರ ಮಹಾಸಭಾದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಎಂ.ಶಿವಣ್ಣ, ಪರಶಿವಮೂರ್ತಿ, ಬೆಟ್ಟಸ್ವಾಮಿ ಇತರರು ಇದ್ದರು.
ಸಗರಗೂರು ಪಟ್ಟಣದ ಡಾ.ಬಾಬು ಜಗಜೀವನ ರಾಮ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಮಾದಾರ ಮಹಾಸಭಾದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಎಂ.ಶಿವಣ್ಣ, ಪರಶಿವಮೂರ್ತಿ, ಬೆಟ್ಟಸ್ವಾಮಿ ಇತರರು ಇದ್ದರು.
Published on
ಸರಗೂರು: ಕರ್ನಾಟಕ ಮಾದಾರ ಮಹಾಸಭಾಕ್ಕೆ ಸರಗೂರು ಹಾಗೂ ಎಚ್.ಡಿ.ಕೋಟೆ ತಾಲೂಕಿನಿಂದ 2000 ಜನರ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ತಿಳಿಸಿದರು.
ಪಟ್ಟಣದ ಡಾ.ಬಾಬು ಜಗಜೀವನ ರಾಮ್ ಸಮುದಾಯ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಾದಾರ ಮಹಾಸಭಾದ ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ಮಾದಾರ ಮಹಾಸಭಾದ ಉದ್ದೇಶ ಮಾದಿಗ ಸಮುದಾಯವನ್ನು ಒಂದೇ ವೇದಿಕೆಗೆ ಕರೆತಂದು ಸಂಘಟನೆ ಮಾಡುವುದಾಗಿದೆ. ಜತೆಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಕಾಣಲು ಇದೊಂದು ಪ್ರಮುಖ ಪಾತ್ರ ವಹಿಸುತ್ತದೆ. ರಾಜ್ಯದಲ್ಲಿ ಬಹುದೊಡ್ಡ ಸಂಘಟನೆಯಾಗಿದೆ. ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ನಮ್ಮ ಸಮುದಾಯಕ್ಕೆ ಸಿಗಬೇಕಾದ ನ್ಯಾಯ ಮತ್ತು ಹಕ್ಕುಗಳಿಗಾಗಿ ನಾವೆಲ್ಲರೂ ಒಗ್ಗೂಡಬೇಕಾಗಿದೆ. ಸಂಘಟನೆಯ ಮೂಲಕವೇ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಹಾಗಾಗಿ ಮಾದಾರ ಮಹಾಸಭಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಸೇರಿಸಿ ಸಮಾಜದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಡಾ.ಬಾಬು ಜಗಜೀವನ ರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ.ತಿಮ್ಮಯ್ಯ ಮಾತನಾಡಿ, ಸಮುದಾಯ ಅಭಿವೃದ್ಧಿ ಹೊಂದಲು ಸಂಘಟನೆ ಪ್ರಮುಖ ಪಾತ್ರ ವಹಿಸುತ್ತದೆ. ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರತಿ ಗ್ರಾಮಗಳಿಗೆ ತೆರಳಿ, ಮಾದಾರ ಮಹಾಸಭಾದ ಉದ್ದೇಶವನ್ನು ಜನರಿಗೆ ತಿಳಿಸಿ ಸದಸ್ಯತ್ವ ನೋಂದಣಿ ಮಾಡಿಸಿ, ಸಂಘಟನೆ ಹಾಗೂ ಸಮುದಾಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ಎಚ್.ಡಿ.ಕೋಟೆ ಮಾದಾರ ಮಹಾಸಭಾ ತಾಲೂಕು ಅಧ್ಯಕ್ಷ ಪರಶಿವಮೂರ್ತಿ ಮಾತನಾಡಿ, ಸಮುದಾಯವನ್ನು ಒಗ್ಗೂಡಿಸುವುದು, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಮುದಾಯವನ್ನು ಉತ್ತೇಜಿಸುವ ಸಲುವಾಗಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಈ ಸಂಘಟನೆ ನಿರ್ಮಾಣವಾಗಿದೆ ಎಂದರು.
ಈ ಸಂದರ್ಭದಲ್ಲಿ ಸರಗೂರು ಮಾದರ ಮಹಾಸಭಾ ತಾಲೂಕು ಅಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ, ಎಚ್.ಡಿ.ಕೋಟೆ ಮಾದರ ಮಹಾಸಭಾ ಅಧ್ಯಕ್ಷ ಕೃಷ್ಣಾಪುರ ಪರಶಿವಮೂರ್ತಿ, ಹೀರಳ್ಳಿ ಪ್ರಕಾಶ್, ಉಡ ನಾಗರಾಜ್, ಚಲುವರಾಜು, ಸಿ.ಕಾಳಪ್ಪಾಜಿ, ಡಿ.ನಾಗರಾಜು, ಶಿವಯ್ಯ, ಎಡತೊರೆ ಶಿವರಾಜ್, ವೆಂಕಟಪ್ಪ, ದೇವನಾಥ್, ರವೀಶ್, ಗಿರಿ ಪ್ರಸಾದ್, ಮಹದೇವು, ಸಿಂಗಯ್ಯ, ಚೌಡಯ್ಯ, ಶಿವಲಿಂಗಯ್ಯ, ನಾಗರಾಜ್, ಮಹದೇವ, ಜಯಕುಮಾರ್, ಗುರುಮಲ್ಲು, ಶ್ರೀನಿವಾಸ್, ಶಿವರಾಜ್, ಮಂಜುನಾಥ್, ಶಿವಾಜಿ, ಚಿಕ್ಕಸ್ವಾಮಿ, ರಮೇಶ್, ವೈರ್ ಮುಡಿ, ಹನುಮಂತ, ಚೇತನ್, ಮಾದು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net