ಮಹಿಳೆಯರಿಗೆ ಮನೋಸ್ಥೈರ್ಯ ಅತ್ಯಂತ ಮುಖ್ಯ: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ.ಸವಿತಾ ಅಭಿಮತ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಇಲ ಎಂ.ಕೆ.ಸವಿತಾ, ಪ್ರೊ.ಶರಣಪ್ಪ ವಿ.ಹಲಸೆ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ನವೀನ್‌ಕುಮಾರ್, ಪರೀಕ್ಷಾಂಗ ಕುಲಸಚಿವ ಡಾ.ಸಿ.ಎಸ್.ಆನಂದ್‌ಕುಮಾರ್, ಡೀನ್ ರಾಮನಾಥನಾಯ್ಡು, ಚಂದ್ರುಗೌಡ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮಹಿಳೆಯರು ಕುಟುಂಬ, ಪರಿಸರ ಮತ್ತು ಸಮಾಜದ ಹೊಣೆಗಾರಿಕೆಯನ್ನು ಸಮತೋಲನದಿಂದ ನಿರ್ವಹಿಸಿ ಇತರರಿಗೆ ಮಾದರಿಯಾಗಿದ್ದಾರೆ
ಮಹಿಳೆಯರಿಗೆ ಮನೋಸ್ಥೈರ್ಯ ಅತ್ಯಂತ ಮುಖ್ಯ. ಅದನ್ನು ಶಿಕ್ಷಣದಿಂದ ಪಡೆಯುತ್ತಿದ್ದಾರೆ
ಮೈಸೂರು:ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಉದ್ಯೋಗ ಮತ್ತು ಆರ್ಥಿಕ ಸ್ವಾವಲಂಬನೆಯಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿ ಸಮಾಜದಲ್ಲಿ ತಮ್ಮ ಸ್ಥಾನ ನಿರ್ಮಿಸಿಕೊಳ್ಳುತ್ತಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ.ಸವಿತಾ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೈಲೆಟ್, ಇಂಜಿನಿಯರ್, ವೈದ್ಯರು, ಆಡಳಿತಾಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾರೆ. ಕುಟುಂಬ, ಪರಿಸರ ಮತ್ತು ಸಮಾಜದ ಹೊಣೆಗಾರಿಕೆಯನ್ನು ಸಮತೋಲನದಿಂದ ನಿರ್ವಹಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮಹಿಳೆಯರು ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಮೂಲಕ ಸಮಾಜದ ಸವಾಲುಗಳನ್ನು ಮೀರಿ ಮುಂದಕ್ಕೆ ಬರುತ್ತಿದ್ದಾರೆ. ಮಹಿಳೆಯರಿಗೆ ಮನೋಸ್ಥೈರ್ಯ ಅತ್ಯಂತ ಮುಖ್ಯ. ಅದನ್ನು ಶಿಕ್ಷಣದಿಂದ ಪಡೆಯುತ್ತಿದ್ದಾರೆ ಎಂದರು.
ಎರಡು ದಶಕಗಳ ಆಡಳಿತ ಸೇವಾ ಅನುಭವದಲ್ಲಿ ಮಹಿಳೆಯರು ಎದುರಿಸುವ ಹಲವು ಸಾಮಾಜಿಕ ಸಮಸ್ಯೆಗಳನ್ನು ಸಮೀಪದಿಂದ ಗಮನಿಸಿದ್ದೇನೆ. ಹಿಂದೆ ಮಹಿಳಾ ಹಿಂಸೆ, ವರದಕ್ಷಿಣೆ ಹಾಗೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಅವು ಕಡಿಮೆಯಾಗಿ ಪುರುಷರಿಗೆ ಸರಿಸಮನಾಗಿ ಬೆಳೆಯುತ್ತಿದ್ದಾಳೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ನವೀನ್‌ಕುಮಾರ್, ಪರೀಕ್ಷಾಂಗ ಕುಲಸಚಿವ ಡಾ.ಸಿ.ಎಸ್.ಆನಂದ್‌ಕುಮಾರ್, ಡೀನ್ ರಾಮನಾಥನಾಯ್ಡು, ಚಂದ್ರುಗೌಡ ಇತರರು ಇದ್ದರು.