ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಆದ್ಯತೆ ನೀಡುವುದರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡುತ್ತಿದೆ. ಕ್ಷೇತ್ರದ ಹಲವು ಗ್ರಾಮಗಳು ಕಾಡಂಚಿನ ಪ್ರದೇಶದಲ್ಲಿವೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀಕಂಠ ನಾಯಕ, ಹರೀಶ್, ಚನ್ನಕೇಶವ ಇತರರು ಹಾಜರಿದ್ದರು.